ADVERTISEMENT

ಎಪಿಎಂಸಿ ಕಾರ್ಯದರ್ಶಿ ಸೋಮು ನ್ಯಾಮಗೌಡ ಬಂಧಿಸಿದ ಸಿಬಿಐ

​ಪ್ರಜಾವಾಣಿ ವಾರ್ತೆ
Published 8 ಜುಲೈ 2021, 5:34 IST
Last Updated 8 ಜುಲೈ 2021, 5:34 IST
 ಸೋಮು ನ್ಯಾಮಗೌಡ
ಸೋಮು ನ್ಯಾಮಗೌಡ   

ಧಾರವಾಡ:ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಪಿಎಂಸಿ ಕಾರ್ಯದರ್ಶಿ ಸೋಮುನ್ಯಾಮಗೌಡ ಅವರನ್ನು ಸಿಬಿಐ ಅಧಿಕಾರಿಗಳು ಗುರುವಾರ ಬಂಧಿಸಿ ಇಲ್ಲಿನ ಉಪನಗರ ಠಾಣೆಗೆ ವಿಚಾರಣೆಗಾಗಿ ಕರೆತಂದಿದ್ದಾರೆ.

ಸೋಮುನ್ಯಾಮಗೌಡ ಅವರು ಪಕರಣದಲ್ಲಿ ಬಂಧಿತರಾಗಿರುವ ವಿನಯ ಕುಲಕರ್ಣಿ ಗಣಿ ಮತ್ತು ಭೂ ವಿಜ್ಞಾನ ಸಚಿವರಾಗಿದ್ದಾಗ ಅವರ ಆಪ್ತ ಕಾರ್ಯದರ್ಶಿಯಾಗಿದ್ದರು. ಸದ್ಯ ಬ್ಯಾಡಗಿ ಎಪಿಎಂಸಿ ಕಾರ್ಯದರ್ಶಿಯಾಗಿದ್ದಾರೆ.

ಗುರುವಾರ ನಸುಕಿನಲ್ಲಿ ಗದುಗಿನಲ್ಲಿರುವ ಅವರ ಮನೆಗೆ ಹೋದ ಸಿಬಿಐ ಅಧಿಕಾರಿಗಳು ಅವರನ್ನು ಬಂಧಿಸಿ ಕರೆ ತಂದಿದ್ದಾರೆ. ಈ ಹಿಂದೆಯೂ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.