ADVERTISEMENT

ರಕ್ತದಲ್ಲಿ ಪತ್ರ ಬರೆದಿದ್ದ ಮಂಜುನಾಥ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 14 ಮೇ 2023, 16:38 IST
Last Updated 14 ಮೇ 2023, 16:38 IST
ಜಗದೀಶ ಶೆಟ್ಟರ್‌
ಜಗದೀಶ ಶೆಟ್ಟರ್‌   

ಹುಬ್ಬಳ್ಳಿ: ಹು–ಧಾ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜಗದೀಶ ಶೆಟ್ಟರ್‌ ಅವರು ಚುನಾವಣೆಯಲ್ಲಿ ಸೋತ ಬೆನ್ನಲ್ಲೆ, ‘ಶೆಟ್ಟರ್‌ ನೂರಕ್ಕೆ ನೂರು ಗೆಲ್ಲುತ್ತಾರೆ’ ಎಂದು ರಕ್ತದಲ್ಲಿ ಪತ್ರ ಬರೆದಿದ್ದ ಮಂಜುನಾಥ ಎನ್‌. ಯಂಟ್ರೂವಿ ಅವರು ಯುವ ಕಾಂಗ್ರೆಸ್‌ ಸಮಿತಿಯ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

‘ಶೆಟ್ಟರ್‌ ಅವರನ್ನು ಗೆಲ್ಲಿಸಲೇಬೇಕೆಂದು ಪಣತೊಟ್ಟು ಕೆಲಸ ಮಾಡಿದ್ದೆವು. ಅವರ ಸೋಲಿನಿಂದ ತೀವ್ರ ನೋವಾಗಿದೆ. ನೈತಿಕ ಹೊಣೆ ಹೊತ್ತು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ’ ಎಂದು ಯುವ ಕಾಂಗ್ರೆಸ್‌ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಮೊಹಮ್ಮದ್‌ ನಲಪಾಡ್‌ ಅವರಿಗ ಪತ್ರ ಬರೆದಿದ್ದಾರೆ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT