ಧಾರವಾಡ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವರೂಪಾ ಟಿ.ಕೆ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಇ–ಗವರ‍್ನೆನ್ಸ್ )ನಿರ್ದೇಶಕ ಹುದ್ದೆಗೆ ಶುಕ್ರವಾರ ವರ್ಗಾವಣೆ ಮಾಡಲಾಗಿದೆ.
ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಭುವನೇಶ ದೇವಿದಾಸ್ ಪಾಟೀಲ ಅವರನ್ನು ಧಾರವಾಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.