ಚಾಮರಾಜನಗರ: ಎರಡನೇ ಹಂತದಲ್ಲಿ ನಡೆಯಲಿರುವ ಗ್ರಾಮ ಪಂಚಾಯಿತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೂರನೇ ದಿನವಾದ ಸೋಮವಾರ 591 ಮಂದಿ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಯಳಂದೂರು ತಾಲ್ಲೂಕಿನಲ್ಲಿ 114, ಕೊಳ್ಳೇಗಾಲ ತಾಲ್ಲೂಕಿನಲ್ಲಿ 203 ಹಾಗೂ ಹನೂರು ತಾಲ್ಲೂಕಿನಲ್ಲಿ 274 ನಾಮಪತ್ರಗಳು ಸಲ್ಲಿಕೆಯಾಗಿವೆ.
ಇದುವರೆಗೆ ಯಳಂದೂರು ತಾಲೂಕಿನಲ್ಲಿ 191, ಕೊಳ್ಳೇಗಾಲ ತಾಲ್ಲೂಕಿನಲ್ಲಿ 305 ಮತ್ತು ಹನೂರು ತಾಲ್ಲೂಕಿನಲ್ಲಿ 336 ನಾಮಪತ್ರಗಳು ಸಲ್ಲಿಕೆಯಾಗಿವೆ. ಒಟ್ಟು 832 ಮಂದಿ ನಾಮಪತ್ರ ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.