ADVERTISEMENT

ಚಿಕ್ಕೋಡಿ ತಾಲೂಕಿನಲ್ಲಿ ಪ್ರವಾಹ ಮುನ್ಸೂಚನೆ: ಭರದ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 2 ಜುಲೈ 2022, 7:29 IST
Last Updated 2 ಜುಲೈ 2022, 7:29 IST
   

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಸಂಭವನೀಯ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ತಾಲ್ಲೂಕು ಆಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ.

ತಾಲ್ಲೂಕಿನಲ್ಲಿ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳು ಹರಿಯುತ್ತಿವೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಮತ್ತು ತಾಲ್ಲೂಕಿನ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮರೆಯಾಗುವ ಮುನ್ಸೂಚನೆ ಇದೆ. ಇದರಿಂದ ಪ್ರವಾಹ ಎದುರಾಗಲಿದ್ದು, ಜನ‌- ಜಾನುವಾರುಗಳ ಸುರಕ್ಷತೆಗಾಗಿ ಸೂಕ್ತ ಸಿದ್ಧತೆ ಕೈಗೊಳ್ಳಲಾಗಿದೆ.

ಈಗಾಗಲೇ 16 ದೋಣಿಗಳನ್ನು ಸುಸ್ಥಿತಿಯಲ್ಲಿ ಇಡಲಾಗಿದೆ. ಎನ್.ಡಿ.ಆರ್.ಎಫ್ ನ 40 ಜನ ಸಿಬ್ಬಂದಿ ತಾಲ್ಲೂಕಿನಲ್ಲಿ ಬೀಡು ಬಿಟ್ಟಿದ್ದು, ಸಂಭವನೀಯ ಪ್ರವಾಹದ ಸಮೀಕ್ಷೆ ನಡೆಸುತ್ತಿದೆ.

ADVERTISEMENT

ಶಾಲೆ, ಕಾಲೇಜುಗಳಲ್ಲಿ ಅಣಕು ಪ್ರದರ್ಶನ ನೀಡಿ, ಪ್ರವಾಹದಿಂದ ಪಾರಾಗುವ ಕುರಿತು ಜಾಗೃತಿ ಮೂಡಿಸುತ್ತಿದೆ.

ತಾಲ್ಲೂಕು ಆಡಳಿತ ಕಾಳಜಿ ಕೇಂದ್ರಗಳನ್ನು ಗುರುತಿಸಿದೆ.

ನೋನಡಲ್ ಅಧಿಕಾರಿಗಳನ್ನು ನೇಮಕ ಮಾಡಿ, ಸಭೆ ನಡೆಸಲಾಗಿದ್ದು ನದಿಗಳ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.