ADVERTISEMENT

ಅಂತೂರ ಗ್ರಾಮದಲ್ಲಿ ನೇತ್ರ ತಪಾಸಣೆ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2012, 6:49 IST
Last Updated 22 ಡಿಸೆಂಬರ್ 2012, 6:49 IST

ಗದಗ: ತಾಲ್ಲೂಕಿನ ಅಂತೂರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಸಂಖ್ಯೆ 1ರಲ್ಲಿ ಇತ್ತೀಚೆಗೆ ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ, ಹುಬ್ಬಳ್ಳಿಯ ಡಾ. ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆ, ಜಿಲ್ಲಾ ಆಯುಷ್ ಇಲಾಖೆ, ಗ್ರಾಮ ಪಂಚಾಯಿತಿ, ರೇಣುಕಾದೇವಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಸರ್ಕಾರಿ ಆಯುರ್ವೇದಿಕ್ ಚಿಕಿತ್ಸಾ ಲಯ ಸಂಯುಕ್ತ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ಜರುಗಿತು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೆಂಕರೆಡ್ಡಿ ಉಮಚಗಿ ಶಿಬಿರ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಸಾವಿತ್ರಿ ಕುರುಬರ ಮಾತನಾಡಿ, ಎಲ್ಲ ದಾನಕ್ಕಿಂತ ನೇತ್ರ ದಾನ ಶ್ರೇಷ್ಠವಾದದ್ದು. ಪ್ರತಿಯೊಬ್ಬರೂ ನೇತ್ರದಾನ ಮಾಡಲು ಪಣ ತೊಡಬೇಕು. ಸರ್ಕಾರದ ಯೋಜನೆಗಳನ್ನು ಸದ್ಭಳಕೆ ಮಾಡಿಕೊಂಡು ಉತ್ತಮ ಜೀವನ ನಡೆಸಬೇಕು ಎಂದರು.

ಡಾ. ಅಶೋಕ ಮತ್ತಿಗಟ್ಟಿ ಮಾತನಾಡಿ, ಆಯುಷ್ ಇಲಾಖೆಯ ಪ್ರಯೋಜನಗಳ ಕುರಿತು ವಿವರಿಸಿದರು. ಎಂ.ಬಿ. ಬಂಕದ, ಎಚ್.ಯು. ಆಲೂರ, ಎಸ್.ವಿ.ಕೆ. ಹಿರೇಮಠ ಮತ್ತಿತರರು ಹಾಜರಿದ್ದರು. ಶಿಬಿರದಲ್ಲಿ 160ಕ್ಕೂ ಹೆಚ್ಚು ಜನರಿಗೆ ಕಣ್ಣಿನ ತಪಾಸಣೆ ಮಾಡ ಲಾಯಿತು. 25 ಜನರನ್ನು ಶಸ್ತ್ರ ಚಿಕಿತ್ಸೆಗಾಗಿ ಆಯ್ಕೆ ಮಾಡಲಾಯಿತು. ವೈದ್ಯಾಧಿಕಾರಿ ಡಾ. ಲೋವಿನಾ ಸ್ವಾಗತಿಸಿದರು. ಪ್ರಕಾಶ ಗಿಡ್ಡಣ್ಣವರ ನಿರೂಪಿಸಿದರು. ಬಿ.ಎಸ್. ಆಲೂರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.