ADVERTISEMENT

ಅಭಿವೃದ್ಧಿಗೆ ಆದ್ಯತೆ ನೀಡಿದ ಬಿಜೆಪಿ

ಗದಗ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಿಲ ಮೆಣಸಿನಕಾಯಿ ಅಭಿಮತ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2018, 10:22 IST
Last Updated 28 ಏಪ್ರಿಲ್ 2018, 10:22 IST

ಮುಳಗುಂದ: ‘ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿಕೊಂಡಿರುವ ಜನ ರಾಜ್ಯದಲ್ಲೂ ಈ ಬಾರಿ ಬಿಜೆಪಿಯನ್ನು ಅಧಿಕಾರಕ್ಕೆ ತರಲಿದ್ದಾರೆ. ಆ ನಿಟ್ಟಿನಲ್ಲಿ ವಿವಿಧ ಪಕ್ಷಗಳನ್ನು ತೊರೆದ ಕಾರ್ಯಕರ್ತರು ಬಿಜೆಪಿ ಸೇರುತ್ತಿದ್ದಾರೆ’ ಎಂದು ಗದಗ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಿಲ ಮೆಣಸಿನಕಾಯಿ ಹೇಳಿದರು.

ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ 50ಕ್ಕೂ ಹೆಚ್ಚು ಜನರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ‘ಗದಗ ಕ್ಷೇತ್ರದ ಸರ್ವಾಗೀಣ ಅಭಿವೃದ್ಧಿಗೆ ಬಿಜೆಪಿಯನ್ನು ಬೆಂಬಲಿಸಬೇಕು’ ಎಂದು ಕೋರಿದರು.

ಬಿಜೆಪಿ ಜಿಲ್ಲಾ ಘಟಕದ ಕಾರ್ಯದರ್ಶಿ ರಾಜು ಕುರಡಗಿ, ಗ್ರಾಮೀಣ ಮಂಡಳದ ಅಧ್ಯಕ್ಷ ಭದ್ರೇಶ ಕುಸ್ಲಾಪುರ, ಸ್ಥಳಿಯ ಘಟಕದ ಅಧ್ಯಕ್ಷ ಬಿ.ಎಂ.ಕುಲಕರ್ಣಿ, ಯಲ್ಲಪ್ಪ ಜಿಡ್ಡಿ, ಮಲ್ಲೇಶ ಬಳ್ಳಾರಿ, ಬಿ.ಎಲ್.ಜಾಧವ, ಕಾರ್ಯಕರ್ತರು ಇದ್ದರು.

ADVERTISEMENT

‘ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ’

ನರೇಗಲ್: ‘ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭಿವೃದ್ಧಿಯನ್ನೇ ಮಾನದಂಡವಾಗಿಸಿಕೊಂಡಿದೆ. ಅಭಿವೃದ್ಧಿ ವಿರೋಧಿಯಾದ ಕಾಂಗ್ರೆಸ್‌ನ ದುರಾಡಳಿತದಿಂದ ರಾಜ್ಯವನ್ನು ಮುಕ್ತ ಮಾಡುವುದೇ ಬಿಜೆಪಿ ಗುರಿ’ ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಹೇಳಿದರು.

ಸ್ಥಳಿಯ ಪಟ್ಟಣ ಪಂಚಾಯ್ತಿ ಮಾಜಿ ಸದಸ್ಯ ಸಂಜೀವ ಕುಲಕರ್ಣಿ ಹಾಗೂ ಬೆಂಬಲಿಗರನ್ನು ಪಕ್ಷಕ್ಕೆ ಬರಮಾಡಿ
ಕೊಂಡು ಮಾತನಾಡಿದ ಅವರು, ‘ಕಾಂಗ್ರೆಸ್ ಸರ್ಕಾರದಲ್ಲಿ ದುರಾಡಳಿತ ಹೆಚ್ಚಾಗಿದ್ದು, ಭ್ರಷ್ಟಾಚಾರ ಮಿತಿಮೀರಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಯಾವುದನ್ನೂ ಸಮರ್ಪಕವಾಗಿ ನಿಭಾಯಿಸಲು ಆಗದ ಕಾಂಗ್ರೆಸ್‌ನಿಂದ ಜನ ಭ್ರಮನಿರಸನಗೊಂಡಿದ್ದು, ಈ ಬಾರಿ ಬಿಜೆಪಿ ಬೆಂಬಲಿಸಲಿದ್ದಾರೆ’ ಎಂದರು.

ನಿಂಗಪ್ಪ ಬೇವಿನಮರದ, ರಾಜಣ್ಣ ಹೂಲಿ, ಮುತ್ತು ಕಡಗದ, ರವಿ ದಂಡಿನ, ಮುತ್ತಣ್ಣ ಸಂಗಳದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.