ಗದಗ: ವಿದ್ಯಾರ್ಥಿಗಳು ಮನಸ್ಸನ್ನು ಹತೋಟಿಯಲ್ಲಿ ಇಟ್ಟುಕೊಂಡು ಅಧ್ಯಯನ ಮಾಡಬೇಕು ಎಂದು ನಗರಸಭೆ ಅಧ್ಯಕ್ಷ ಶಿವಣ್ಣ ಮುಳಗುಂದ ಸಲಹೆ ನೀಡಿದರು. ಸ್ಥಳೀಯ ನಗರಸಭೆ ಸಭಾ ಭವನದಲ್ಲಿ ಇತ್ತೀಚೆಗೆ ದಲಿತ ಯುವ ಸೇನಾ ಸಮಿತಿ ವಿದ್ಯಾರ್ಥಿ ಘಟಕದ ಆಶ್ರಯದಲ್ಲಿ ಏರ್ಪಡಿಸಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಪ್ರಶ್ನೆಪತ್ರಿಕೆ ಬಿಡಿಸುವ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾ ಡಿದರು.
ನಗರಸಭೆ ಸದಸ್ಯ ಸಿದ್ದು ಪಲ್ಲೇದ ಮಾತನಾಡಿ, ವಿದ್ಯಾರ್ಥಿಗಳು ಕಾಲಹರಣ ಮಾಡದೆ ಹೆಚ್ಚು ಜ್ಞಾನಾರ್ಜನೆ ಮಾಡುವ ಮೂಲಕ ಸದುಪಯೋಗಪಡಿಸಿಕೊಳ್ಳಬೇಕು ಎಂದರು.ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಮನೋಹರ ಪೂಜಾರ, ದಲಿತ ಯುವ ಸೇನಾ ಸಮಿತಿ ಅಧ್ಯಕ್ಷ ವಿಜಯ ಮುಳಗುಂದ ಮಾತನಾ ಡಿದರು. ಉಪನ್ಯಾಸಕ ಅನಿಲ ವೈದ್ಯ ಉಪನ್ಯಾಸ ನೀಡಿದರು.
ಕಾರ್ಯಾಗಾರದಲ್ಲಿ ವಿವಿಧ ಕಾಲೇಜುಗಳು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಪ್ರಕಾಶ ಕೆಲೂರ, ಅಪ್ಪು ಹಿತ್ತಲಮನಿ, ಮಂಜು ನೀಲಗುಂದ, ಯಲ್ಲಪ್ಪ ಹೊಸೂರ, ವಿಜಯ ಕುಮಾರ ಗೌಳಿ, ವಿವೇಕಾನಂದ ಪಾಟೀಲ ಮತ್ತಿತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.