ADVERTISEMENT

ಕೋಟೆ ವೀರಭದ್ರೇಶ್ವರ ರಥೋತ್ಸವ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2018, 10:41 IST
Last Updated 29 ಮಾರ್ಚ್ 2018, 10:41 IST
ಗದಗ ತಾಲ್ಲೂಕಿನ ಲಕ್ಕುಂಡಿ ಕೋಟೆ ವೀರಭದ್ರೇಶ್ವರ ರಥೋತ್ಸವ ಬುಧವಾರ ಸಂಜೆ ಸಂಭ್ರಮದಿಂದ ನಡೆಯಿತು
ಗದಗ ತಾಲ್ಲೂಕಿನ ಲಕ್ಕುಂಡಿ ಕೋಟೆ ವೀರಭದ್ರೇಶ್ವರ ರಥೋತ್ಸವ ಬುಧವಾರ ಸಂಜೆ ಸಂಭ್ರಮದಿಂದ ನಡೆಯಿತು   

ಲಕ್ಕುಂಡಿ (ಗದಗ ತಾ.): ಗ್ರಾಮದ 40ನೇ ವರ್ಷದ ಕೋಟೆ ವೀರಭದ್ರೇಶ್ವರ ರಥೋತ್ಸವ ಬುಧವಾರ ಸಂಜೆ ಸಂಭ್ರಮದಿಂದ ನಡೆಯಿತು.

ಕಪ್ಪತಗುಡ್ಡದ ನಂದಿವೇರಿ ಮಠದ ಶಿವಕುಮಾರ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿದರು. ಭಕ್ತರು ‘ವೀರಭದ್ರೇಶ್ವರ ಮಹಾರಾಜಕೀ ಜೈ, ಹರ ಹರ ಮಹಾದೇವ’ ಎಂಬ ಘೋಷಣೆಗಳನ್ನು ಕೂಗುವ ಮೂಲಕ ರಥ ಎಳೆದರು.ತೇರಿಗೆ ಉತ್ತತ್ತಿ, ಹಣ್ಣು, ಕಾಯಿ ಎಸೆದು ಹರಕೆ ತೀರಿಸಿದರು.

ನಂದಿಕೋಲ ಮೇಳ, ಜಾಂಜ್ ಮೇಳ, ಡೊಳ್ಳು ಕುಣಿತ ಸೇರಿ ಜಾನಪದ ಕಲಾ ತಂಡಗಳು ರಥೋತ್ಸವಕ್ಕೆ ಕಳೆ ತಂದವು. ಜಾತ್ರೆಯ ಅಂಗವಾಗಿ ಬೆಳಿಗ್ಗೆ ವೀರಭದ್ರ ದೇವರಿಗೆ ರುದ್ರಾಭಿಷೇಕ ಹಾಗೂ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.