ADVERTISEMENT

`ನಾಲ್ಕೇ ತಿಂಗಳಲ್ಲಿ ಕಿತ್ತು ಹೋದ ರಸ್ತೆ'

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2013, 5:49 IST
Last Updated 5 ಆಗಸ್ಟ್ 2013, 5:49 IST

ಲಕ್ಷ್ಮೇಶ್ವರ: ಏಳೆಂಟು ತಿಂಗಳ ಹಿಂದಷ್ಟೇ ಜಿಲ್ಲೆ ಹಾಗೂ ತಾಲ್ಲೂಕಿನ ಕೊನೆಯ ಗ್ರಾಮ ಗೋವನಾಳದಿಂದ ಮಾಗಡಿವರೆಗೆ ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಿಸಿದ್ದ ಪಾಳಾ-ಬಾದಾಮಿ ರಾಜ್ಯ ಹೆದ್ದಾರಿಯ ಡಾಂಬರ್ ಕಿತ್ತು ಹೋಗುತ್ತಿದ್ದು, ಕಳಪೆ ಕಾಮಗಾರಿಗೆ ಕನ್ನಡಿ ಹಿಡಿದಂತಿದೆ.

ಸರ್ಕಾರದ ಕೋಟ್ಯಂತರ ರೂಪಾಯಿ ದುರ್ಬಳಕೆ ಆಗಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಈಚೆಗೆ ಶಿಗ್ಲಿ ಗ್ರಾಮ ಪಂಚಾಯ್ತಿ ಸದಸ್ಯ ಪದ್ಮರಾಜ ಪಾಟೀಲ ಹಾಗೂ ಬಸವರಾಜ ಮಜ್ಜಿಗುಡ್ಡ ಮಾತನಾಡಿ `2010-11ರಲ್ಲಿ 2. 10 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ನಿರ್ಮಿಸಲಾಗಿತ್ತು. ಆದರೆ ಪುನಃ 2011-12ರಲ್ಲಿ ಲೋಕೋಪಯೋಗಿ ಇಲಾಖೆ ರಸ್ತೆಯನ್ನು ಅಗಲೀಕರಣ ಮಾಡಿ 11 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ರಸ್ತೆ ನಿರ್ಮಿಸಿದ್ದರು.

ಆದರೆ ನಿರ್ಮಾಣ ಮಾಡಿದ ಕೆಲವೇ ತಿಂಗಳಲ್ಲಿ ಹೊಸ ರಸ್ತೆಗೆ ಹಾಕಿದ್ದ ಡಾಂಬರ್ ಅಲ್ಲಲ್ಲಿ ಕಿತ್ತು ಹೋಗಿದ್ದು ಅನುದಾನ ದುರ್ಬಳಕೆ ಆಗಿದೆ ಎಂಬುದನ್ನು ತೋರಿಸುತ್ತಿದೆ ಎಂದರು. ಕಳಪೆ ಕಾಮಗಾರಿ ಮಾಡಿರುವ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ಸರಿಯಾಗಿ ಕಾಮಗಾರಿ ಪರಿಶೀಲಿಸದ ಲೋಕೋಪಯೋಗಿ ಎಂಜಿನಿಯರ್ ಅವರನ್ನು   ಅಮಾನತು ಮಾಡಬೇಕು ಎಂದು  ಆಗ್ರಹಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.