ADVERTISEMENT

ನೀತಿ ಸಂಹಿತೆ ಉಲ್ಲಂಘನೆ: ನಗದು, ಸೀರೆ, ಮದ್ಯ ವಶ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2018, 10:55 IST
Last Updated 13 ಏಪ್ರಿಲ್ 2018, 10:55 IST

ಗದಗ: ನೀತಿ ಸಂಹಿತೆ ಉಲ್ಲಂಘಿಸಿ ದಾಖಲೆ ಇಲ್ಲದೆ ವಾಹನದಲ್ಲಿ ಸಾಗಿಸುತ್ತಿದ್ದ ಒಟ್ಟು ₹ 1.64 ಲಕ್ಷ ನಗದನ್ನು ಚುನಾವಣಾ ಅಧಿಕಾರಿಗಳು ಬುಧವಾರ ರಾತ್ರಿ ನಗರದಲ್ಲಿ ವಶಕ್ಕೆ ಪಡೆದಿದ್ದಾರೆ.

ತಾಲ್ಲೂಕಿನ ಬಸಾಪುರ ಚೆಕ್‌ಪೋಸ್ಟ್‌ ಬಳಿ ನಗದು ವಶಕ್ಕೆ ಪಡೆಯಲಾಗಿದೆ. ಗದಗ–ಲಕ್ಷ್ಮೇಶ್ವರ ರಸ್ತೆಯ ಕುಟೀರ ಚೆಕ್‌ಪೋಸ್ಟ್‌ ಬಳಿ ವಾಹನದಲ್ಲಿ ಸಾಗಿಸುತ್ತಿದ್ದ  ₹ 75 ಸಾವಿರ ಮೌಲ್ಯದ 206 ಸೀರೆಗಳು ಮತ್ತು ಸಿದ್ಧ ಉಡುಪುಗಳನ್ನು ವಶಕ್ಕೆ ಪಡೆಯಲಾಗಿದೆ.

ಗದಗ–ಹೊಂಬಳ ರಸ್ತೆಯ ಸರ್ವಜ್ಞ ವೃತ್ತದ ಸಮೀಪ ತ್ರಿಚಕ್ರ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 17.28 ಲೀಟರ್‌ ಮದ್ಯವನ್ನು ಅಬಕಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಂಜುನಾಥ ಚಿವಟೆ, ಜಾಫರ್ ಕುರಹಟ್ಟಿ ಅವರನ್ನು ಬಂಧಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.