ADVERTISEMENT

ಪಾದಚಾರಿ ರಸ್ತೆಯಲ್ಲಿ ಕಚ್ಚಾ ವಸ್ತು ಸಂಗ್ರಹ: ತಾಕೀತು

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2018, 9:12 IST
Last Updated 31 ಮಾರ್ಚ್ 2018, 9:12 IST

ಗಜೇಂದ್ರಗಡ: ಪಟ್ಟಣದ ಕಾಲಕಾಲೇಶ್ವರ ವೃತ್ತದಿಂದ ಬಸ್ ನಿಲ್ದಾಣದ ವರೆಗೆ ಪುರಸಭೆ ವತಿಯಿಂದ ನಿರ್ಮಿಸಿರುವ ಪಾದಚಾರಿ ರಸ್ತೆಯನ್ನು ಇಲ್ಲಿನ ಕೆಲ ವ್ಯಾಪಾರಸ್ಥರು ಅತಿಕ್ರಮಣ ಮಾಡಿಕೊಂಡಿದ್ದಾರೆಂಬ ದೂರಿನನ್ವಯ ಗುರುವಾರ ಮುಖ್ಯಾಧಿಕಾರಿ ಹನುಮಂತಮ್ಮ ನಾಯಕ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮಾತನಾಡಿದ ಅವರು ‘ಪಾದಚಾರಿಗಳ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕಾಗಿ ಪುರಸಭೆ ವತಿಯಿಂದ ಅಂದಾಜು ₹16 ಲಕ್ಷ ವೆಚ್ಚದಲ್ಲಿ ಕಾಲಕಾಲೇಶ್ವರ ವೃತ್ತದಿಂದ ಬಸ್ ನಿಲ್ದಾಣದ ವರೆಗೆ ಪಾದಚಾರಿ ರಸ್ತೆ ನಿರ್ಮಿಸಲಾಗಿದೆ. ಆದರೆ ಕೆಲ ವ್ಯಾಪಾರಸ್ಥರು ಅಂಗಡಿಯ ಕಚ್ಚಾ ವಸ್ತುಗಳನ್ನು ಪಾದಚಾರಿ ರಸ್ತೆಯಲ್ಲಿ ಸಂಗ್ರಹಿಸಿ ಅತಿಕ್ರಮಿಸಿಕೊಂಡಿರುವುದು ಕಂಡು ಬಂದಿದೆ’ ಎಂದರು.‘ಇದನ್ನು ತೆರವುಗೊಳಿಸುವಂತೆ ತಿಳಿಸಲಾಗಿದ್ದು, ತೆರವುಗೊಳಿಸದಿದ್ದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಸಿದರು.ಈ ವೇಳೆ ಪೊಲೀಸ್ ಠಾಣೆಯ ಎ.ಎಸ್.ಐ ಎಚ್.ಎಲ್.ಭಜಂತ್ರಿ, ಪುರಸಭೆ ಅಧಿಕಾರಿಗಳಾದ ನಜೀರ್‌ಸಾಬ್ ಸಾಂಗ್ಲೀಕರ, ಸಿ.ವಿ.ಕುಲಕರ್ಣಿ, ಎನ್.ಎಚ್.ಖುದಾನವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.