ADVERTISEMENT

ಬೆಳೆ ವಿಮೆ ಪರಿಹಾರಕ್ಕೆ ರೈತರ ಆಗ್ರಹ

​ಪ್ರಜಾವಾಣಿ ವಾರ್ತೆ
Published 18 ಜುಲೈ 2017, 6:22 IST
Last Updated 18 ಜುಲೈ 2017, 6:22 IST
ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಸೋಮವಾರ ಲಕ್ಷ್ಮೇಶ್ವರದಲ್ಲಿ ರೈತರು ನಡೆಸಿದ ಪ್ರತಿಭಟನೆಯಲ್ಲಿ ಜಿಲ್ಲಾ ಉಪವಿಭಾಗಾಧಿಕಾರಿ ಪಿ.ಎಸ್‌. ಮಂಜುನಾಥ ಅವರಿಗೆ ಮನವಿ ಸಲ್ಲಿಸಲಾಯಿತು
ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಸೋಮವಾರ ಲಕ್ಷ್ಮೇಶ್ವರದಲ್ಲಿ ರೈತರು ನಡೆಸಿದ ಪ್ರತಿಭಟನೆಯಲ್ಲಿ ಜಿಲ್ಲಾ ಉಪವಿಭಾಗಾಧಿಕಾರಿ ಪಿ.ಎಸ್‌. ಮಂಜುನಾಥ ಅವರಿಗೆ ಮನವಿ ಸಲ್ಲಿಸಲಾಯಿತು   

ಲಕ್ಷ್ಮೇಶ್ವರ: ಫಸಲ್‌ ಬಿಮಾ ಯೋಜನೆಯಡಿ ಬೆಳೆ ವಿಮೆ ಪರಿಹಾರ ನೀಡುವಂತೆ ಒತ್ತಾಯಿಸಿ ಸೋಮವಾರ ರೈತರ ಹೋರಾಟ ಸಮಿತಿಯವರು ಕರೆ  ನೀಡಿದ್ದ ಲಕ್ಷ್ಮೇಶ್ವರ ಬಂದ್‌ ಯಶಸ್ವಿ ಆಯಿತು. ಬೆಳಿಗ್ಗೆ ಸ್ಥಳೀಯ ಸೋಮೇಶ್ವರ ದೇವಸ್ಥಾನದಲ್ಲಿ ಜಮಾಯಿಸಿದ ರೈತರು ಮರವಣಿಗೆ ಕೈಗೊಂಡು ನಂತರ ಜಿಲ್ಲಾ ಉಪವಿಭಾಗಾಧಿಕಾರಿ ಬಿ.ಎಸ್‌. ಮಂಜುನಾಥ ಅವರಿಗೆ ಮನವಿ ಸಲ್ಲಿಸಲಾಯಿತು.

ತಾಲ್ಲೂಕು ರೈತಪರ ಹೋರಾಟ ವೇದಿಕೆ ಅಧ್ಯಕ್ಷ ಮಹೇಶ ಹೊಗೆಸೊಪ್ಪಿನ ಮಾತನಾಡಿ, ‘ಪ್ರತಿವರ್ಷವೂ ಬೆಳೆ ವಿಮೆ ಪಾವತಿ ಮಾಡಲಾಗಿದೆ. ಆದರೆ ಯಾವುದೇಪರಿಹಾರ ದೊರೆತಿಲ್ಲ. ಹಾವೇರಿ ಹಾಗೂ ಧಾರವಾಡ ಜಿಲ್ಲೆಗಳ ರೈತರಿಗೆ ವಿಮೆ ಪರಿಹಾರ ದೊರೆತಿದೆ. ಆದರೆ ಗದಗ ಜಿಲ್ಲೆಯ ರೈತರಿಗೆ ವಂಚನೆಗೆ ಒಳಗಾಗುತ್ತಿದ್ದಾರೆ. ಇದಕ್ಕೆ ಬ್ಯಾಂಕ್ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ’ ಎಂದು ಅವರು ಆರೋಪಿಸಿದರು.

ಕರವೇ ಅಧ್ಯಕ್ಷ ಶರಣು ಗೋಡಿ ಮಾತನಾಡಿ, ‘ಕಂದಾಯ ಇಲಾಖೆ ಅಧಿಕಾರಿಗಳು ಆಣೆವಾರಿ ಮಾಡುವಾಗ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ. ರೈತರಿಗೆ ಆಗಿರುವ ಅನ್ಯಾಯ ಸರಿಪಡಿಸಬೇಕು. ಅಲ್ಲವೇ 3 ವರ್ಷಗಳಿಂದ ಬರಗಾಲ ಎದುರಿಸುತ್ತಿರುವ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು’ ಎಂದು ಆಗ್ರಹಿಸಿದರು.

ADVERTISEMENT

ಉಪವಿಭಾಗಾಧಿಕಾರಿ ಬಿ.ಎಸ್‌. ಮಂಜುನಾಥ ಮಾತನಾಡಿ, ‘ಬೆಳೆ ವಿಮೆ ಕಂಪನಿ ಪಾವತಿದ ವಿಮೆ ಕಂಪನಿಗಳ ವಿರುದ್ಧ ಕ್ರಮ ಜರುಗಿಸಲಾಗುವು’ ಎಂದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆ ಜಂಟಿ ಸಹಾಯಕ ನಿರ್ದೇಶಕ ಬಾಲರೆಡ್ಡಿ, ತಹಶೀಲ್ದಾರ್‌ ಎ.ಡಿ. ಅಮರಾವಡಗಿ ಉಪಸ್ಥಿತರಿದ್ದರು.

ಸಣ್ಣೀರಪ್ಪ ಹಳ್ಳೆಪ್ಪನವರ, ಹೋರಾಟ ಸಮಿತಿ ಮುಖಂಡ ಚಂಬಣ್ಣ ಬಾಳಿಕಾಯಿ, ರಾಮಣ್ಣ ಲಮಾಣಿ, ಶರಣು ಗೋಡಿ, ಗಂಗಾಧರ ಅಂಕಲಿ, ಬಸವರಾಜ ಕುಡವಕ್ಕಲಿಗೇರ, ವೀರನಗೌಡ ಪಾಟೀಲ, ಬಿ.ಡಿ. ದೊಡ್ಡಮನಿ, ಸಿದ್ದನಗೌಡ ಬಳ್ಳೊಳ್ಳಿ, ನಿಂಗಪ್ಪ ಬನ್ನಿ, ನೀಲಪ್ಪ ಕರ್ಜೆಕಣ್ಣವರ, ಗಂಗಾಧರ ಮೆಣಸಿನಕಾಯಿ, ರಾಜು ಅಂದಲಗಿ, ಬಸಣ್ಣ ಅಂದಲಗಿ, ರಾಮಣ್ಣ ಗೌರಿ, ವಿರುಪಾಕ್ಷಪ್ಪ ಮುದಕಣ್ಣವರ, ದುಂಡೇಶ ಕೊಟಗಿ, ಶಂಕರ ಬಾಳಿಕಾಯಿ, ಬಸವರಾಜ ಅರಳಿ ಇದ್ದರು.

ಕಾರ್ಯನಿರ್ವಹಿಸದ ಶಾಲಾ ಕಾಲೇಜುಗಳು
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ  ರೈತರ ಹೋರಾಟ ಸಮಿತಿ ಬಂದ್‌ಗೆ ಕರೆ ನೀಡಿದ್ದರಿಂದ ಪಟ್ಟಣದ ಎಲ್ಲ ಶಾಲಾ ಕಾಲೇಜುಗಳು ಕಾರ್ಯನಿರ್ವಸಲಿಲ್ಲ. ಬೆಳಿಗ್ಗೆ 10ರ ನಂತರ ಬಸ್‌ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಎಪಿಎಂಸಿ ಮತ್ತು ಬಜಾರ ವರ್ತಕರು ತಮ್ಮ ವ್ಯಾಪಾರ ವಹಿವಾಟು ಬಂದ್‌ ಮಾಡಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು. ಎಪಿಎಂಸಿ ಹಮಾಲರ ಸಂಘದ ಸದಸ್ಯರು ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.