ADVERTISEMENT

‘ಮಣ್ಣಿನ ಸಂರಕ್ಷಣೆ ಅವಶ್ಯ’

​ಪ್ರಜಾವಾಣಿ ವಾರ್ತೆ
Published 31 ಮೇ 2019, 15:30 IST
Last Updated 31 ಮೇ 2019, 15:30 IST
ಗದಗ ತಾಲ್ಲೂಕಿನ ಕೋಟುಮಚಗಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ  ಕೂಲಿ ಕಾರ್ಮಿಕರಿಗೆ ಆರೋಗ್ಯ ಶಿಬಿರ ನಡೆಯಿತು
ಗದಗ ತಾಲ್ಲೂಕಿನ ಕೋಟುಮಚಗಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರಿಗೆ ಆರೋಗ್ಯ ಶಿಬಿರ ನಡೆಯಿತು   

ಗದಗ: ತಾಲ್ಲೂಕಿನ ಕೋಟುಮಚಗಿ ಗ್ರಾಮದಲ್ಲಿ ನಡೆಯುತ್ತಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಬದುವು ನಿರ್ಮಾಣ ಕಾಮಗಾರಿಯನ್ನು ಜಿಲ್ಲಾ ಪಂಚಾಯ್ತಿ ಅಧಿಕಾರಿಗಳು ಪರಿಶೀಲಿಸಿದರು.

ಕೂಲಿ ಕಾರ್ಮಿಕರಿಗೆ ಏರ್ಪಡಿಸಿದ್ದ ಆರೋಗ್ಯ ಶಿಬಿರವನ್ನು ಜಿಲ್ಲಾ ಪಂಚಾಯ್ತಿಉಪ ಕಾರ್ಯದರ್ಶಿ ಪ್ರಾಣೇಶರಾವ್ ಉದ್ಘಾಟಿಸಿದರು.‘ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಎದುರಾಗಿದೆ. ರೈತರು ತಮ್ಮ ಜಮೀನುಗಳಲ್ಲಿ ಗಿಡ ಬೆಳೆಸಬೇಕಿದೆ. ಜತೆಗೆ ಮಣ್ಣಿನ ಸಂರಕ್ಷಣೆ ಹಾಗೂ ಕೂಲಿಕಾರರಿಗೆ ಉದ್ಯೋಗ ನೀಡುವ ಉದ್ದೇಶದಿಂದ ನರೇಗಾ ಯೋಜನೆಯಡಿ ಕಾಮಗಾರಿ ನಡೆಯುತ್ತಿದೆ. ಇದರಿಂದ ಬರ ಪರಿಸ್ಥಿತಿ ತಡೆಗಟ್ಟಲು ಸಾಧ್ಯವಾಗುತ್ತಿದೆ’ ಎಂದರು.

‘ರೈತರು ಬದುವು ನಿರ್ಮಾಣ ಮಾಡಿಕೊಂಡು, ಬದುವು ಸುತ್ತಲೂ ಸಸಿಗಳನ್ನು, ತೋಟಗಾರಿಕೆ ಬೆಳೆಯನ್ನು ಬೆಳೆಸಬೇಕು. ಮಣ್ಣಿನ ಸಂರಕ್ಷಣೆ ಜತೆಗೆ ಫಲವತ್ತತೆಯನ್ನು ಕಾಪಾಡಿಕೊಳ್ಳಬೇಕು. ಸುಸ್ಥಿರ ಕೃಷಿಯನ್ನು ಅಳವಡಿಸಿಕೊಳ್ಳಬೇಕು. ಕುಡಿಯುವ ನೀರನ್ನು ಮಿತವ್ಯಯವಾಗಿ ಬಳಸಬೇಕು. ಅಂತರ್ಜಲ ಮಟ್ಟ ಹೆಚ್ಚಿಸುವ ಕಾಮಗಾರಿಗಳನ್ನು ಕೈಗೊಳ್ಳಬೇಕು’ ಎಂದ ಅವರು, ಆಯುಷ್ಮಾನ ಭಾರತ ಹಾಗೂ ಫಸಲ್ ಭೀಮಾ ಯೋಜನೆಯ ಕುರಿತು ತಿಳಿಸಿದರು.

ADVERTISEMENT

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ, ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಿ.ಬಿ. ಬಾಲರಡ್ಡಿ, ಉಪನಿರ್ದೇಶಕ ಸಹದೇವ ಯರಗೊಪ್ಪ, ಸಹಾಯಕ ನಿರ್ದೇಶಕ ಮಲ್ಲಯ್ಯ ಕೊರವನವರ,ಉಂಡಿಗೇರಿ, ತಾಲ್ಲೂಕು ಪಂಚಾಯ್ತಿ ಸದಸ್ಯ ವಿದ್ಯಾಧರ ದೊಡ್ಡಮನಿ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಈಶ್ವರಗೌಡ ಸೂರಪ್ಪಗೌಡ್ರ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ರಾಜಕುಮಾರ ಎಚ್.ಬಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಬಸನಗೌಡ ತಿಮ್ಮನಗೌಡ್ರ, ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಎಸ್.ಎಂ. ಓಣಿ, ಡಾ.ಚಂದ್ರು ಹಿರೇಮಠ, ಡಾ.ಬಿರಾದಾರ, ಆರೋಗ್ಯ ಸಹಾಯಕ ಎಸ್.ಎನ್. ಲಿಂಗದಾಳ, ಬಿ.ಸಿ. ಹಿರೇಹಾಳ, ನೀತಾರಾಣಿ ಕಾಂಬಳೆ, ನಾಗರಾಜ ಜೋಷಿ, ಎಸ್.ಬಿ. ಗಡಾದ, ಎಸ್.ಎಂ. ಕರಡಿಗುಡ್ಡ, ಮಂಜುನಾಥ ಭಂಡಾರಿ, ಮಂಜುನಾಥ, ಮಲ್ಲಿಕಾರ್ಜುನ ಸರ್ವಿ, ವೀರೇಶ, ಎಂಜಿನಿಯರ್ ತೊರಗಲ್ ಹಾಗೂ ಆಶಾ ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.