ADVERTISEMENT

ಮತದಾನ ಪ್ರತಿಯೊಬ್ಬರ ಕರ್ತವ್ಯ: ವೀರಣ್ಣ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2013, 6:25 IST
Last Updated 3 ಏಪ್ರಿಲ್ 2013, 6:25 IST

ರೋಣ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿ ಯೊಬ್ಬರು ಮತದಾನ ಮಾಡುವುದು ಅವಶ್ಯ. ಮತದಾನ 18 ವರ್ಷ ಮೀರಿದವರ ಆದ್ಯ ಕರ್ತವ್ಯ, ಪ್ರತಿಯೊಬ್ಬ ನಾಗರಿಕನು ಮತದಾನದಲ್ಲಿ ಭಾಗವಹಿಸುವಂತೆ ಪ್ರೇರೆಪಿಸಬೇಕು ಎಂದು ಜಿ.ಪಂ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ತುರಮರಿ ಹೇಳಿದರು.

ಪಟ್ಟಣದ ಸ್ತ್ರೀ ಶಕ್ತಿ ಸಭಾ ಭವನದಲ್ಲಿ ಜರುಗಿದ ವ್ಯವಸ್ಥಿತ ಮತದಾರರ ಶಿಕ್ಷಣ ಹಾಗೂ ಮತದಾನ ದಲ್ಲಿ ಭಾಗವಹಿಸುವುದರ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅಂಗನವಾಡಿ, ಆಶಾ, ಹಾಗೂ ಆರೋಗ್ಯ ಸಹಾಯಕಿಯರಿಗೆ ತರಬೇತಿ ಕಾರ್ಯಾ ಗಾರದಲ್ಲಿ ಮಾತನಾಡಿದರು.

ಸರಕಾರಿ ಸಂಬಳ ಪಡೆಯುತ್ತಿರುವ ನೌಕರನಾಗಲಿ ಅಥವಾ ಅರೆ ಸರ್ಕಾರಿ ನೌಕರನಾಗಲಿ ಯಾವುದೇ ಪಕ್ಷದ ಪರ ಪ್ರಚಾರದಲ್ಲಿ ಭಾಗವಹಿಸಿದರೆ ಅಂಥವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಂ. ರುದ್ರಸ್ವಾಮಿ ಮಾತನಾಡಿ, ಅಂಗನವಾಡಿ, ಆಶಾ ಹಾಗೂ ಅರೋಗ್ಯ ಸಹಾಯಕಿಯರ ಮೇಲೆ ಹೆಚ್ಚಿನ ಜವಾಬ್ದಾರಿಯಿದ್ದು, ಚುನಾವಣಾ ಆಯೋಗ ನಿರ್ದೇಶನದಂತೆ  ಚುನಾವಣೆಗೆ ನಿಯುಕ್ತಿಗೊಳ್ಳುವ ಇತರ ಅಧಿಕಾರಿಗಳು ಸಹ ತಮ್ಮ ಜವಾಬ್ದಾರಿ ಅರಿತು ಕೆಲಸ ನಿರ್ವಹಿಸಬೇಕು ಮುಖ್ಯವಾಗಿ ಚುನಾವಣೆ ವೇಳೆಯಲ್ಲಿ ತೊಂದರೆಗಳಾದರೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು ಮತ್ತು ಯಾವುದೇ ರೀತಿಯ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳದೇ ಆಯೋಗದ ನಿರ್ದೇಶನದಂತೆ ನಡೆದುಕೊಳ್ಳಬೇಕು ಎಂದು ಎಚ್ಚರಿಸಿದರು.

ತರಬೇತಿಯಲ್ಲಿ ಭಾಗವಹಿಸಿದ ಆಶಾ, ಅಂಗನವಾಡಿ ಮತ್ತು ಆರೋಗ್ಯ ಸಹಾಯಕಿಯರಿಗೆ ಚುನಾವಣೆಯ ವೇಳೆಯಲ್ಲಿ ಆಗಬಹುದಾದ ತೊಂದರೆ ಮತ್ತು ಇತರ ವಿಷಯಗಳ ಬಗ್ಗೆ ಚರ್ಚಿಸಲಾಯಿತು ನಂತರ ಅವರಿಗೂ ಸಹ ತಮ್ಮ ಅನಿಸಿಕೆಗಳನ್ನು ತಿಳಿಸಲು ಅವಕಾಶ ಕಲ್ಪಿಸಲಾಯಿತು.

ಯೋಜನಾಧಿಕಾರಿ ಎನ್.ಆರ್. ಉಮೇಶ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಎಚ್.ಎಸ್. ಪರಮೇಶ್ವರಪ್ಪ, ಜಿಲ್ಲಾ ಆರೋಗ್ಯ ಇಲಾಖೆಯ ಡಾ. ಚನ್ನಶೆಟ್ಟಿ, ತಾಲ್ಲೂಕು ವೈದ್ಯಾಧಿಕಾರಿ ಬಿ.ಎಸ್. ಬಜಂತ್ರಿ, ಸಿಡಿಪಿಒ ಕೆಂಪಹನುಮಯ್ಯ ಸೇರಿದಂತೆ ಅನೇಕ ಅಧಿಕಾರಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.