ADVERTISEMENT

‘ಯೋಗದಿಂದ ಆರೋಗ್ಯ ವೃದ್ಧಿ’

​ಪ್ರಜಾವಾಣಿ ವಾರ್ತೆ
Published 19 ಜೂನ್ 2017, 5:24 IST
Last Updated 19 ಜೂನ್ 2017, 5:24 IST

ಗದಗ: ‘ಪ್ರತಿನಿತ್ಯ ಯೋಗ ಮಾಡುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸದೃಢವಾಗುತ್ತದೆ’ ಎಂದು ಪ್ರಾಚಾರ್ಯ ಸಿ.ಎಸ್.ಕುದರಿಕನ್ನೂರ ಹೇಳಿದರು. ಡಿ.ಜಿ.ಎಂ. ಆಯುರ್ವೇದ ವೈದ್ಯ ಕೀಯ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜಿಲ್ಲಾ ಯೋಗ ಸೇವಾ ಸಮಿತಿಯಿಂದ ಏರ್ಪಡಿಸಿದ್ದ ‘ಯೋಗ ಸಪ್ತಾಹ’ ಕಾರ್ಯಕ್ರಮದ ಪ್ರಯುಕ್ತ ನಡೆದ ಯೋಗ ರಸಪ್ರಶ್ನೆ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಇಂದಿನ ಒತ್ತಡದ ಬದುಕಿನಲ್ಲಿ ಆಹಾರ, ದೈನಂದಿನ ಜೀವನ ಶೈಲಿಯ ಬಗ್ಗೆ ಕಾಳಜಿ ವಹಿಸದೇ ಇರುವುದರಿಂದ ಅನೇಕ ತೊಂದರೆಗಳನ್ನು ಅನುಭವಿಸುತ್ತಿದ್ದೇವೆ. ಆದ್ದರಿಂದ ಆಹಾರ, ವಿಶ್ರಾಂತಿ, ಕ್ರಮಗಳು ಸರಿಯಾಗಿದ್ದರೆ ಮಾತ್ರ ಆರೋಗ್ಯದಿಂದ ಇರಲು ಸಾಧ್ಯವಾಗುತ್ತದೆ’ ಎಂದು ಕಾರ್ಯಕ್ರಮ ಉದ್ಘಾಟಿಸಿದ ಡಿ.ಜಿ.ಎಂ. ಆಯುರ್ವೇದ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕ ಡಾ.ಸಿ.ಎಸ್.ಹಿರೇಮಠ ತಿಳಿಸಿದರು.

ಜಿಲ್ಲಾ ಯೋಗ ಸೇವಾ ಸಮಿತಿಯ ಉಪಾಧ್ಯಕ್ಷ ಡಾ.ಎಸ್.ಆರ್.ಹಿರೇಮಠ, ಪ್ರಾಧ್ಯಾಪಕ ಡಾ.ಎಸ್.ಎಸ್.ಅವ್ವಣ್ಣಿ, ಯೋಗಾಚಾರ್ಯ ಕೆ.ಎಸ್.ಪಲ್ಲೇದ ಅವರು ಯೋಗದ ಮಹತ್ವ ಕುರಿತು ಮಾತನಾಡಿದರು. ಪ್ರಾಧ್ಯಾಪಕ ಡಾ.ಅಶೋಕ ಪಾಟೀಲ, ಎಸ್.ಬಿ.ಮೆಣಸಗಿ, ತೇಜಸ್ವಿನಿ, ಸಂಧ್ಯಾಶ್ರೀ, ಡಾ.ಬೂದೇಶ ಕನಾಜ, ಪ್ರಾಚಾರ್ಯ ಎಸ್.ಎಸ್.ಹಿರೇಮಠ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.