ADVERTISEMENT

ರೋಣ: ಸಿದ್ದರಾಮಯ್ಯಗೆ ಅದ್ಧೂರಿ ಸ್ವಾಗತ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2018, 10:38 IST
Last Updated 25 ಏಪ್ರಿಲ್ 2018, 10:38 IST

ರೋಣ: ಬಾದಾಮಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ರೋಣ ಮಾರ್ಗದಿಂದ ತೆರಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರೋಣ ಪಟ್ಟಣದ ಸೂಡಿ ವೃತ್ತದಲ್ಲಿ ಶಾಸಕ ಜಿ.ಎಸ್.ಎಸ್ ಪಾಟೀಲ ಸೇರಿ ಸಾವಿರಾರು ಕಾರ್ಯಕರ್ತರು ಸಂಭ್ರಮದ ಸ್ವಾಗತ ನೀಡಿದರು.

ಪಟ್ಟಣದಲ್ಲಿ ಬೆಳಿಗ್ಗೆಯಿಂದ ನೆರೆದಿದ್ದ ಕಾರ್ಯಕರ್ತರು ಕಾಂಗ್ರೆಸ್ ಧ್ವಜ ಪ್ರದರ್ಶಿಸುತ್ತ ಸಿದ್ದರಾಮಯ್ಯ ಪರ ಘೋಷಣೆ ಕೂಗಿದರು. ಹಾಲು ಮತದ ಸಮಾಜದವರು ಕಂಬಳಿ ಮತ್ತು ಭಂಡಾರದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಿ ಸಂಭ್ರಮಪಟ್ಟರು.

‌ಮಾಡಲಗೇರಿ ಗ್ರಾಮದ ಅಭಿಮಾನಿಗಳು, ಕಾರ್ಯಕರ್ತರು 101 ಎತ್ತಿನ ಬಂಡಿಗಳ ಮೂಲಕ ಬಾದಾಮಿಗೆ ತೆರಳಿ ಸಿದ್ದರಾಮಯ್ಯ ಅವರಿಗೆ ಬೆಂಬಲ ಸೂಚಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.