ADVERTISEMENT

ವಸತಿ ಶಾಲೆಗಳ ರದ್ದು: ಖಂಡನೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2013, 7:05 IST
Last Updated 6 ಜೂನ್ 2013, 7:05 IST

ಗದಗ: ಜಗದೀಶ ಶೆಟ್ಟರ್ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಮಂಜೂರಾಗಿದ್ದ ಮೊರಾರ್ಜಿ ದೇಸಾಯಿ ಹಾಗೂ ಕಿತ್ತೂರ ಚೆನ್ನಮ್ಮ, ವಾಜಪೇಯಿ ವಸತಿ ಶಾಲೆ, ಏಕಲವ್ಯ ಮಾದರಿ ಶಾಲೆಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿಗೆ ರಾಜ್ಯ ಸರ್ಕಾರ ತಡೆ ನೀಡಿರುವುದು ಅವಿವೇಕತನದ ಪರಮಾವಧಿ ಎಂದು ರಾಣಿ ಚೆನ್ನಮ್ಮ ಪಾರ್ಟಿ ಸಂಸ್ಥಾಪಕ ಅಧ್ಯಕ್ಷ ಎಂ.ಬಿ.ದೇಸಾಯಿ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ರಾಜಕೀಯ ದುರುದ್ದೇಶದಿಂದ ಈಗಾಗಲೇ ಮಂಜೂರಾಗಿದ್ದ ವಸತಿ ಶಾಲೆಗಳಿಗೆ ವಿದ್ಯಾರ್ಥಿಗಳ ಪ್ರವೇಶ ನಿರಾಕರಣೆ ಮಾಡಿರುವುದು ಸರಿಯಲ್ಲ,  ಶಾಲೆಗಳನ್ನು ರದ್ದುಗಳಿಸಲು ಸರ್ಕಾರ ಮುಂದಾದರೆ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.

ಮೂಲ ಸೌಕರ್ಯದ ನೆಪ ಹೇಳಿ ಕಿತ್ತೂರ ರಾಣಿ ಚೆನ್ನಮ್ಮ ಶಾಲೆ ಸೇರಿದಂತೆ 78 ವಸತಿ ಶಾಲೆಗಳಲ್ಲಿ ವ್ಯಾಸಂಗಕ್ಕೆ ಸಿದ್ದವಾಗಿದ್ದ ನೂರಾರು ಗ್ರಾಮೀಣ ವಿದ್ಯಾರ್ಥಿಗಳ ಪ್ರವೇಶವನ್ನು ಸರ್ಕಾರ ತಡೆ ಹಿಡಿದು, ವಿದ್ಯಾರ್ಥಿ ಜನತೆಯ ಭವಿಷ್ಯವನ್ನು ಕಗ್ಗತ್ತಲಿಗೆ ದೂಡಿದೆ ಎಂದು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.