ADVERTISEMENT

ವಿದ್ಯಾರ್ಥಿಗಳು ಸಮಾಜ ಸೇವೆಯಲ್ಲಿ ತೊಡಗಿಕೊಳ್ಳಿ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2011, 6:40 IST
Last Updated 4 ಅಕ್ಟೋಬರ್ 2011, 6:40 IST

ಗದಗ: ಸಮುದಾಯದ ಅಭಿವೃದ್ಧಿಯಲ್ಲಿ ಸಮಾಜ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿರುತ್ತದೆ. ವಿದ್ಯಾರ್ಥಿಗಳು ಸಮಾಜ ಸೇವೆಗಳಲ್ಲಿ ತೊಡಗಿಕೊಳ್ಳಬೇಕು ಎಂದು ಕನಕದಾಸ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ. ಬಿ.ಎಫ್. ದಂಡಿನ ಹೇಳಿದರು.

ಸ್ಥಳೀಯ ಸಮಾಜಕಾರ್ಯ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಸಾಂಘಿ ಕ ಚಟುವಟಿಕೆ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಉತ್ತಮ ಸಮಾಜ ಕಾರ್ಯಕರ್ತರಾಗಲು ಉಪನ್ಯಾಸಕರ ಮಾರ್ಗದರ್ಶನ, ಗ್ರಂಥಾಲಯ ಅಗತ್ಯ. ವಿದ್ಯಾರ್ಥಿಗಳು ಹೆಚ್ಚು ಅಧ್ಯಯನಶೀಲರಾಗುವ ಮೂಲಕ ಜ್ಞಾನಾರ್ಜನೆಮಾಡಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಟಿ. ದಿನೇಶ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ದಿನದಲ್ಲಿ ವಿದ್ಯಾರ್ಥಿಗಳಲ್ಲಿ ಸಮಯ ಪ್ರಜ್ಞೆ ಇರಬೇಕು. ಸಾಮಾನ್ಯ ಜ್ಞಾನ, ಪ್ರಚಲಿತ ವಿದ್ಯಮಾನಗಳ ಕುರಿತು ಸಮಗ್ರ ಮಾಹಿತಿ ಅರಿವು ಪಡೆದುಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಸಮಾಜಕಾರ್ಯ ಸ್ನಾತಕೋತ್ತರ ಕೇಂದ್ರದ ಸಂಯೋಜಕ ಡಾ. ಅಂಬರೀಶ ಕಂಪ್ಲಿ ಮಾತನಾಡಿದರು. ಪ್ರಾಚಾರ್ಯ ಸಿ.ಎಸ್. ಬೊಮ್ಮನಹಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಚಾರ್ಯೆ ಜಯಶ್ರೀ ಬೆನಕನವಾರಿ, ಎಸ್.ಸಿ. ಪಾಟೀಲ, ಪರಶುರಾಮ ಹೊಸಮನಿ, ಎಂ.ವೈ. ಹುಬ್ಬಳ್ಳಿ ಮತ್ತಿತರರು ಹಾಜರಿದ್ದರು. ಸಾಲಿ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಎನ್‌ಎಸ್‌ಎಸ್ ಅಧಿಕಾರಿ ಪ್ರಕಾಶ ಗಾಣಿಗೇರ ನಿರೂಪಿಸಿದರು. ಡಾ. ಶೇಖರ ಗಡಗಿ ವಂದಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.