ನರೇಗಲ್: ಶಿಕ್ಷಣದಿಂದ ಮಹಿಳಾ ಸಮಾಜದ ಸಬಲೀಕರಣ ಸಾಧ್ಯ ಎಂದು ಗಜೇಂದ್ರಗಡದ ಸ್ನೇಹಾ ಮಹಿಳಾ ಮಂಡಳದ ಗೌರವಾಧ್ಯಕ್ಷೆ ಸಂಯುಕ್ತಾ ಬಂಡಿ ಹೇಳಿದರು.
ನರೇಗಲ್ ಸಮೀಪದ ಜಕ್ಕಲಿ ಗ್ರಾಮದ ಹಾಲಕೇರಿ ಅನ್ನದಾನೇಶ್ವರ ಕಲ್ಯಾಣ ಮಂಟಪದಲ್ಲಿ ಇತ್ತೀಚೆಗೆ ಶಿವಶರಣಿ ಹೇಮರಡ್ಡಿ ಮಲ್ಲಮ್ಮ ಟ್ರಸ್ಟ್ ಕಮಿಟಿ ಹಾಗೂ ಮಹಿಳಾ ಸ್ವಸಹಾಯ ಗುಂಪುಗಳು ಹಮ್ಮಿಕೊಂಡಿದ್ದ ಮುತ್ತೈ ದೆಯರಿಗೆ ಉಡಿ ತುಂಬುವ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು.
ಪಾಲಕರು ತಪ್ಪದೇ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು. ಮಹಿಳೆ ಯರು ಸ್ವಸಹಾಯ ಗುಂಪುಗಳ ಮೂಲಕ ಹಣ ಉಳಿತಾಯ ಮಾಡಿ, ಆರ್ಥಿಕವಾಗಿ ಸಬಲರಾಗಬೇಕು. ನಮ್ಮಲ್ಲಿರುವ ಕೀಳರೀಮೆಯನ್ನು ಬಿಟ್ಟು ಸ್ವಾವಲಂಬಿಗಳಾಗಿ ಬದುಕಬೇಕು ಎಂದು ಕಿವಿ ಮಾತು ಹೇಳಿದರು.
ಸಾನ್ನಿಧ್ಯ ವಹಿಸಿದ್ದ ಶಿವಶರಣೆ ನೀಲಮ್ಮತಾಯಿ ಅಸುಂಡಿ ಮಾತನಾಡಿ, ಮಹಿಳಾ ಸಂಘಗಳ ಸ್ವಾವಲಂಬಿ ಸಂಕಲ್ಪ ಮಹಿಳಾ ಸಮಾಜಕ್ಕೆ ದಾರಿ ದೀಪವಾಗಬೇಕು. ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಮಹಿಳೆ ಕ್ರೀಯಾಶೀಲ ಳಾಗಿ ಧರ್ಮ ಮಾರ್ಗ ದಲ್ಲಿ ನಡೆಯಬೇಕು ಎಂದು ಹೇಳಿದರು.
ಹಾಲವ್ವ ಮುಗಳಿ ಅಧ್ಯಕ್ಷತೆ ವಹಿಸಿದ್ದರು. ರತ್ನವ್ವ ಮುಗಳಿ, ಅನ್ನಪೂರ್ಣಾ ಮೇಟಿ, ಸರೋಜಾ ಕಡಗದ, ಶಿವಶರಣಿ ಹೇಮರಡ್ಡಿ ಮಲ್ಲಮ್ಮ ಟ್ರಸ್ಟ್ ಕಮಿಟಿ ಪದಾಧಿಕಾರಿಗಳು ಮತ್ತು ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯೆಯರು, ಮಹಿಳೆಯರು ಭಾಗವಹಿಸಿದ್ದರು.
ಕಳಕಪ್ಪ ಮುಗಳಿ ಸ್ವಾಗತಿಸಿದರು. ಶೇಖವ್ವ ಹೊಸಮನಿ ನಿರೂಪಿಸಿದರು. ಸಂಗಮೇಶ ಮೆಣಸಗಿ ವಂದಿಸಿದರು.
ಕಾರ್ಯಕ್ರಮದಲ್ಲಿ ಮಲ್ಲಮ್ಮನ ಭಾವಚಿತ್ರದ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ನಂದೀಶ್ವರ ಹೋರಿ, ಜಲ ಕುಂಭ, ಕರಡಿ ಮಜಲು ಹಾಗೂ ಡೊಳ್ಳಿನ ಮೇಳ ದವರು ಮೆರವಣಿಗೆಯಲ್ಲಿ ಭಾಗವ ಹಿಸಿದ್ದರು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.