ADVERTISEMENT

ಶಿಶುಪಾಲನಾ ಕೇಂದ್ರಗಳಿಗೆ ಅಧೀಕಾರಿಗಳ ಭೇಟಿ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2012, 19:39 IST
Last Updated 11 ಡಿಸೆಂಬರ್ 2012, 19:39 IST

ಕುಷ್ಟಗಿ: ಸರ್ಕಾರದ ಅನುದಾನದಲ್ಲಿ ಸ್ವಯಂ ಸೇವಾ ಸಂಸ್ಥೆಗಳು ನಡೆಸುತ್ತಿರುವ ಶಿಶುಪಾಲನಾ ಕೇಂದ್ರಗಳು ಕಾಟಾಚಾರಕ್ಕೆ ನಡೆಯುತ್ತಿರುವುದು ಬೆಳಕಿಗೆ ಬಂದಿದ್ದು ಅಂಥ ಕೇಂದ್ರಗಳಿಗೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಅನುದಾನ ಕಡಿತಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.

ಮಂಗಳವಾರ ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಶಿಶುಪಾಲನಾ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ.ಜಯಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಸ್.ಎ.ಬೆಳ್ಳಿಹಾಳ ಅಲ್ಲಿನ ಕಾರ್ಯವೈಖರಿಯನ್ನು ಪರಿಶೀಲಿಸಿದರು. ಆದರೆ ಅನೇಕ ಕೇಂದ್ರಗಳು ಕಾಟಾಚಾರಕ್ಕೆ ಎನ್ನುವಂತಿದ್ದರೆ ಬಹುತೇಕ ಕೇಂದ್ರಗಳು ಹೆಸರಿಗೆ ಮಾತ್ರ ಎನ್ನುವಂತಾಗಿರುವುದು, ಬೋರ್ಡ್ ಸಹ ಇಲ್ಲದಿರುವುದಕ್ಕೆ ಅಧಿಕಾರಿಗಳು ಬೇಸರ ವ್ಯಕ್ತಪಡಿಸಿದರು.

ಕೆಲ ಕೇಂದ್ರಗಳು ಶಾಶ್ವತ ಬಂದ್ ಆಗಿರುವುದು ಪರಿಶೀಲನೆ ನಡೆಸಿದಾಗ ಕಂಡುಬಂದಿದ್ದು, ಈ ಬಗ್ಗೆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ. ಅಲ್ಲದೇ ಅಂಥ ಕೇಂದ್ರಗಳಿಗೆ ಈ ವರ್ಷದ ಅನುದಾನ ನೀಡದಂತೆ ಶಿಫಾರಸು ಮಾಡಲಾಗುತ್ತದೆ ಎಂದು ಅಧಿಕಾರಿಗಳು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.