ADVERTISEMENT

ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2017, 8:39 IST
Last Updated 15 ನವೆಂಬರ್ 2017, 8:39 IST

ನರಗುಂದ: ‘ಬಹುರಾಷ್ಟ್ರೀಯ ಕಂಪೆನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ ಲಭಿಸುತ್ತಿಲ್ಲ. ಕನ್ನಡದಲ್ಲಿ ನಾಮಫಲಕಗಳಿಲ್ಲ. ಹೀಗಾದರೆ ಕನ್ನಡದ ನೆಲದಲ್ಲಿ ಕನ್ನಡದ ಉಳಿವು ಯಾವಾಗ’ ಎಂದು ಆಕ್ರೋಶ ವ್ಯಕ್ತಪಡಿಸಿದ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಸದಸ್ಯರು ಕೂಡಲೇ ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್‌ ಮೂಲಕ ಸರ್ಕಾರಕ್ಕೆ ಮಂಗಳವಾರ ಮನವಿ ಸಲ್ಲಿಸಿದರು.

‘ಬೆಂಗಳೂರಿನಲ್ಲಿ ಬಹುರಾಷ್ಟ್ರೀಯ ಕಂಪೆನಿಗಳು ಹೆಚ್ಚುತ್ತಿರುವ ಕಾರಣ ಅಲ್ಲಿ ಕನ್ನಡ ಮಾತನಾಡುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಹೊರ ರಾಜ್ಯದವರೇ ಹೆಚ್ಚಾಗಿದ್ದಾರೆ. ಅನ್ಯ ಭಾಷಿಕರು ಕನ್ನಡ ಕಲಿಯುವುದು ಕಡ್ಡಾಯಗೊಳಿಸಬೇಕು.ಇದಕ್ಕೆ ತ್ವರಿತ ಕ್ರಮ ತೆಗೆದುಕೊಳ್ಳಬೇಕು.

ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಕಾರ್ಯಕರ್ತರು ಆಗ್ರಹಿಸಿದರು. ತಹಶೀಲ್ದಾರ್‌ ಪ್ರಕಾಶ ಹೊಳೆಪ್ಪಗೋಳ ಮನವಿ ಸ್ವೀಕರಿಸಿದರು. ತಾಲ್ಲೂಕು ಘಟಕದ ಅಧ್ಯಕ್ಷ ಹನಮಂತ ಮಜ್ಜಿಗುಡ್ಡ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.