ADVERTISEMENT

ಕಪ್ಪತಗುಡ್ಡ: 15 ಹೆಕ್ಟೇರ್‌ ಅರಣ್ಯಕ್ಕೆ ಬೆಂಕಿ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2021, 5:43 IST
Last Updated 28 ಫೆಬ್ರುವರಿ 2021, 5:43 IST
ಕಪ್ಪತಗುಡ್ಡಕ್ಕೆ ಬಿದ್ದಿದ್ದ ಬೆಂಕಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಶನಿವಾರ ನಂದಿಸಿದರು
ಕಪ್ಪತಗುಡ್ಡಕ್ಕೆ ಬಿದ್ದಿದ್ದ ಬೆಂಕಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಶನಿವಾರ ನಂದಿಸಿದರು   

ಡಂಬಳ: ಹೋಬಳಿಯ ಕೆಲೂರ ಗ್ರಾಮದ ಬಳಿಯ ಕಪ್ಪತಗುಡ್ಡ ಅರಣ್ಯ ಪ್ರದೇಶದಲ್ಲಿ ಶನಿವಾರ ಮಧ್ಯಾಹ್ನ 2ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಅಂದಾಜು 15 ಹೆಕ್ಟೇರ್‌ ಅರಣ್ಯ ಪ್ರದೇಶ ನಾಶವಾಗಿದೆ.

ವಲಯ ಅರಣ್ಯಾಧಿಕಾರಿ ಪ್ರದೀಪ ಪವಾರ ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಸತತ ಎರಡು ಗಂಟೆಗಳು ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ.

‘ಕಿಡಿಗೇಡಿಗಳು ದುರುದ್ದೇಶದಿಂದಲೇ ಬೆಂಕಿ ಹಚ್ಚಿದ್ದಾರೆ. ಶನಿವಾರದ ಬೆಂಕಿ ಅವಘಡದಲ್ಲಿ ಒಣಗಿದ್ದ ಹುಲ್ಲು ಮಾತ್ರ ಸುಟ್ಟಿದೆ’ ಎಂದು ವಲಯ ಅರಣ್ಯಾಧಿಕಾರಿ ಪ್ರದೀಪ ಪವಾರ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.