ADVERTISEMENT

ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆ; ಜಾಗೃತಿ ಆಂದೋಲನ ನಾಳೆಯಿಂದ

​ಪ್ರಜಾವಾಣಿ ವಾರ್ತೆ
Published 7 ಜನವರಿ 2018, 9:18 IST
Last Updated 7 ಜನವರಿ 2018, 9:18 IST

ಗದಗ: ‘ಜಿಲ್ಲೆಯನ್ನು ಸಂಪೂರ್ಣ ಬಯಲು ಶೌಚ ಮುಕ್ತಗೊಳಿಸುವ ನಿಟ್ಟಿನಲ್ಲಿ ಜ. 7ರಿಂದ ವಿಶೇಷ ಜಾಗೃತಿ ಆಂದೋಲನ ನಡೆಯಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಹೇಳಿದರು.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ. 7ರಿಂದ 21ರವರೆಗೆ ಈ ಅಭಿಯಾನ ನಡೆಯಲಿದ್ದು, 25 ಕಾಲೇಜುಗಳ 1,427 ಎನ್‌.ಎಸ್‌.ಎಸ್‌ ಸ್ವಯಂಸೇವಕರು ಹಾಗೂ 30 ಅಧಿಕಾರಿಗಳು ಈ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ.

ಜಿಲ್ಲೆಯ ಪ್ರತಿ ಕುಟುಂಬವೂ ಶೌಚಾಲಯ ಹೊಂದುವಂತೆ ಮಾಡಿ, ಅದನ್ನು ಬಳಸುವಂತೆ ಜಾಗೃತಿ ಮೂಡಿಸುವುದು ಅಭಿಯಾನದ ಮುಖ್ಯ ಉದ್ದೇಶ. ಈ ನಿಟ್ಟಿನಲ್ಲಿ ಜಿಲ್ಲೆ, ತಾಲ್ಲೂಕು, ಗ್ರಾಮ ಪಂಚಾಯ್ತಿ, ಪಟ್ಟಣ ಪಂಚಾಯ್ತಿ, ಪುರಸಭೆ, ನಗರಸಭೆ, ಪಾಲಿಕೆಗಳು ಸಹಕಾರ ನೀಡಲಿವೆ’ ಎಂದು ಅವರು ತಿಳಿಸಿದರು.

ADVERTISEMENT

ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ವಾಸಣ್ಣ ಕುರಡಗಿ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪ್ರಭು ಬುರಬುರೆ, ಜಿಲ್ಲಾ ಪಂಚಾಯ್ತಿ ಸದಸ್ಯ ಸಿದ್ದು ಪಾಟೀಲ, ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.