ADVERTISEMENT

‘ವಚನ ಸಾಹಿತ್ಯದಿಂದ ಜನ ಜಾಗೃತಿ ಸಾಧ್ಯ’

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2018, 9:54 IST
Last Updated 2 ಫೆಬ್ರುವರಿ 2018, 9:54 IST

ಗದಗ: ‘ಮಡಿವಾಳ ಮಾಚಿದೇವರು ಕಾಯಕ ನಿಷ್ಠೆಯೊಂದಿಗೆ ವಚನ ಸಾಹಿತ್ಯ ರಚಿಸುವ ಮೂಲಕ ಮೂಢನಂಬಿಕೆ, ಅಂಧ ಆಚರಣೆಗಳ ವಿರುದ್ಧ ಜನ ಜಾಗೃತಿ ಮೂಡಿಸಿದರು’ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಭು ಬುರಬುರೆ ಹೇಳಿದರು.

ಇಲ್ಲಿ ಜಿಲ್ಲಾಡಳಿತದಿಂದ ನಡೆದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ರೂಪಾ ಅಂಗಡಿ ಕಾರ್ಯಕ್ರಮ ಉದ್ಘಾಟಿಸಿದರು. ಶಂಕ್ರಣ್ಣ ಅಂಗಡಿ ಉಪನ್ಯಾಸ ನೀಡಿದರು. ‘ವಿಜಯಪುರ ಜಿಲ್ಲೆಯ ಹಿಪ್ಪರಗಿ ಮಡಿವಾಳ ಮಾಚಿದೇವರು 350ಕ್ಕೂ ಹೆಚ್ಚು ವಚನಗಳನ್ನು ಬರೆದಿದ್ದಾರೆ’ ಎಂದರು.

ಸಾವಿತ್ರಿ ಲಮಾಣಿ ಹಾಗೂ ತಂಡವರು ನಾಡಗೀತೆ ಹಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ ಸ್ವಾಗತಿಸಿದರು. ರತ್ನಕ್ಕ ಪಾಟೀಲ ನಿರೂಪಿಸಿದರು. ಫಕೀರಪ್ಪ ಮಡಿವಾಳ ವಂದಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.