ADVERTISEMENT

ಕಡಲೆ ಖರೀದಿ ಕೇಂದ್ರ ಆರಂಭ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2018, 7:24 IST
Last Updated 4 ಫೆಬ್ರುವರಿ 2018, 7:24 IST
ಲಕ್ಷ್ಮೇಶ್ವರದ ಅಡರಕಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬೆಂಬಲ ಬೆಲೆಯ ಕಡಲೆ ಖರೀದಿ ಕೇಂದ್ರಕ್ಕೆ ಶಾಸಕ ರಾಮಕೃಷ್ಣ ದೊಡ್ಡಮನಿ ಶುಕ್ರವಾರ ಚಾಲನೆ ನೀಡಿದರು
ಲಕ್ಷ್ಮೇಶ್ವರದ ಅಡರಕಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬೆಂಬಲ ಬೆಲೆಯ ಕಡಲೆ ಖರೀದಿ ಕೇಂದ್ರಕ್ಕೆ ಶಾಸಕ ರಾಮಕೃಷ್ಣ ದೊಡ್ಡಮನಿ ಶುಕ್ರವಾರ ಚಾಲನೆ ನೀಡಿದರು   

ಲಕ್ಷ್ಮೇಶ್ವರ: ಇಲ್ಲಿಗೆ ಸಮೀಪದ ಅಡರಕಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಶಾಸಕ ರಾಮಕೃಷ್ಣ ದೊಡ್ಡಮನಿ ಬೆಂಬಲ ಬೆಲೆಯ ಕಡಲೆ ಖರೀದಿ ಕೇಂದ್ರಕ್ಕೆ ಶುಕ್ರವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ‘ರೈತರ ಹಿತ ಕಾಯುವ ಉದ್ದೇಶದಿಂದ ಸರ್ಕಾರ ಕಡಲೆ ಖರೀದಿ ಕೇಂದ್ರ ಆರಂಭಿಸಿದೆ. ಕಡಲೆ ಬೆಳೆದ ರೈತರು ತಮ್ಮ ಫಸಲನ್ನು ಕೇಂದ್ರಕ್ಕೆ ತಂದು ಮಾರಾಟ ಮಾಡಬೇಕು’ ಎಂದರು.

‘ರಾಜ್ಯ ಸರ್ಕಾರ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದ್ದು ರೈತರ ಅನುಕೂಲಕ್ಕಾಗಿ ಕೃಷಿ ಹೊಂಡಗಳನ್ನು ನಿರ್ಮಿಸಿ ಕೊಟ್ಟಿದೆ. ಮಳೆ ಕೈಕೊಟ್ಟಾಗ ರೈತರು ಕೃಷಿ ಹೊಂಡದಲ್ಲಿನ ನೀರನ್ನು ಬಳಸಿಕೊಂಡು ಕೃಷಿ ಮಾಡಬಹುದಾಗಿದೆ’ ಎಂದರು.

ADVERTISEMENT

ಬಸವೆಣ್ಣೆಪ್ಪ ರೊಳ್ಳಿ, ಚಂದ್ರಗೌಡ ಪಾಟೀಲ, ರಾಮಣ್ಣ ಚಿಕ್ಕಣ್ಣವರ, ಯಲ್ಲಪ್ಪ ಹವಳದ, ಮಹಾದೇವಪ್ಪ ಹವಳದ, ಶೇಖರಗೌಡ ಪಾಟೀಲ, ಮಾನಪ್ಪ ಲಮಾಣಿ, ವೀರಯ್ಯ ಮಠಪತಿ, ಯಲ್ಲಪ್ಪಗೌಡ ಉದ್ದನಗೌಡ್ರ, ಶೇಖಣ್ಣ ಕರೆಣ್ಣವರ, ಹಾಲೇಶ ಡೊಳ್ಳಿನ ಹಾಜರಿದ್ದರು.

ಕಾರ್ಯಕ್ರಮದಲ್ಲಿ ಸಹಕಾರಿ ಇಲಾಖೆಯ ಬಸವರಾಜ ನಿಡಗುಂದಿ ಸ್ವಾಗತಿಸಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.