ನರೇಗಲ್: ‘ಪ್ರಸ್ತುತ ದಿನಮಾನಗಳಲ್ಲಿ ಆರೋಗ್ಯಕರ ಬದುಕನ್ನು ನಡೆಸಲು ಉತ್ತಮ ಜೀವನ ಶೈಲಿಯೊಂದಿಗೆ ಸ್ವಚ್ಚ ಹಾಗೂ ಉತ್ತಮ ಪರಿಸರ ಅಗತ್ಯ. ಮರ ಗಿಡಗಳನ್ನು ಹೆಚ್ಚಾಗಿ ಬೆಳೆಸುವ ಮೂಲಕ ಪ್ರಕೃತಿಗೆ ನಮ್ಮ ಕೊಡುಗೆ ನೀಡಬೇಕು’ ಎಂದು ಗದಗ ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ ಹೇಳಿದರು.
ನರೇಗಲ್ ಸಮೀಪದ ಕೋಟುಮಚಗಿ ಗ್ರಾಮದ ಸೋಮೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮಸ್ಥರು ಹಮ್ಮಿಕೊಂಡ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.
‘ಹೆಚ್ಚುತ್ತಿರುವ ಭೂಮಿ ತಾಪಮಾನವನ್ನು ಕಡಿಮೆ ಮಾಡಲು ಹಾಗೂ ಹಸಿರನ್ನು ಹೆಚ್ಚಿಸಿ ಶುದ್ಧ ಗಾಳಿಯನ್ನು ಪಡೆಯಲು ಪ್ರತಿಯೊಬ್ಬರು ಮರಗಿಡಗಳನ್ನು ಬೆಳೆಸಬೇಕಾದ ಅಗತ್ಯವಿದೆ. ಜಾತ್ರೆ ಅಂಗವಾಗಿ ಮರಗಿಡಗಳನ್ನು ನೆಡುವ ಮೂಲಕ ಗ್ರಾಮದ ಸೌಂದರ್ಯವನ್ನು ಹೆಚ್ಚಿಸುವದರ ಜೊತೆಗೆ ಆರೋಗ್ಯಕರ ವಾತಾವರಣ ನಿರ್ಮಿಸಲು ಸಾಧ್ಯ. ಈ ನಿಟ್ಟಿನಲ್ಲಿ ನಮ್ಮ ಇಲಾಖೆ ಹಮ್ಮಿಕೊಂಡ ಈ ಕಾರ್ಯಕ್ರಮ ಅರ್ಥಪೂರ್ಣವಾಗಿದೆ’ ಎಂದು ಹೇಳಿದರು.
ಗದಗ ಉಪ ತಹಶೀಲ್ದಾರ್ ಡಿ.ಟಿ. ವಾಲ್ಮೀಕಿ, ಗ್ರಾಮಸ್ಥರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.