ADVERTISEMENT

ಸದಾಶಿವ ಆಯೋಗದ ವರದಿ ಜಾರಿಗೆ ಸಚಿವ ನಾರಾಯಣಸ್ವಾಮಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2021, 1:59 IST
Last Updated 21 ಆಗಸ್ಟ್ 2021, 1:59 IST
ಮುಂಡರಗಿ ಪಟ್ಟಣದಲ್ಲಿ ತಾಲ್ಲೂಕು ದಲಿತ ಸಂಘರ್ಷ ಸಮಿತಿ ಸದಸ್ಯರು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು
ಮುಂಡರಗಿ ಪಟ್ಟಣದಲ್ಲಿ ತಾಲ್ಲೂಕು ದಲಿತ ಸಂಘರ್ಷ ಸಮಿತಿ ಸದಸ್ಯರು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು   

ಮುಂಡರಗಿ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರು ಶುಕ್ರವಾರ ಪಟ್ಟಣದ ಮಾರ್ಗವಾಗಿ ಚಿತ್ರದುರ್ಗಕ್ಕೆ ತೆರಳುವಾಗ ಸ್ಥಳೀಯ ಜೆಎಂಎಫ್‍ಸಿ ನ್ಯಾಯಾಲಯದ ಮುಂದಿರುವ ಹೆದ್ದಾರಿ ಬಳಿ ಅವರನ್ನು ತಾಲ್ಲೂಕು ದಲಿತ ಸಂಘರ್ಷ ಸಮಿತಿ ವತಿಯಿಂದ ಹೂಮಳೆ ಸುರಿಸಿ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ತರಬೇಕು ಎಂದು ಅವರಿಗೆ ಮನವಿ ಸಲ್ಲಿಸಲಾಯಿತು.

‘25 ವರ್ಷಗಳಿಂದ ಸದಾಶಿವ ಆಯೋಗದ ವರದಿ ಜಾರಿ ತರಬೇಕು ಎಂದು ನಿರಂತರವಾಗಿ ಹೋರಾಟ ಮಾಡಿಕೊಂಡು ಬರಲಾಗುತ್ತಿದೆ. ಎಲ್ಲ ರೀತಿ ಸವಲತ್ತುಗಳಿಂದ ವಂಚಿತವಾಗಿರುವ ಸಮಾಜಕ್ಕೆ ಅನುಕೂಲ ಮಾಡಿಕೊಡಲು ಬಹುದಿನಗಳ ಬೇಡಿಕೆಯಾದ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗವನ್ನು ಯಾಥಾವತ್ತಾಗಿ ಜಾರಿಗೆ ತರಬೇಕು’ ಎಂದು ಒತ್ತಾಯಿಸಿದರು.

ADVERTISEMENT

ತಾಲ್ಲೂಕು ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ದುರುಗಪ್ಪ ಹರಿಜನ, ಸಂಜಯ್ ಚವಡಾಳ, ಸೋಮು ಹೈತಾಪುರ, ಮಾರುತಿ ಹೊಸಮನಿ, ನಿಂಗರಾಜ ಹಾಲಿನವರ, ಲಕ್ಷ್ಮಣ ತಗಡಿನಮನಿ, ಮಲ್ಲೇಶ ಹರಿಜನ, ಮಾರುತಿ ಮ್ಯಾಗೇರಿ, ನಿಂಗರಾಜ ಮೇಗಲಮನಿ, ಸಹದೇವಪ್ಪ ರಾಮೇನಹಳ್ಳಿ, ನಿಂಗರಾಜ ಸ್ವಾಗಿ, ಪ್ರವೀಣ ವಡ್ಡಟ್ಟಿ, ನಿಂಗಪ್ಪ ಪೆದ್ದರ, ಫಕೀರಪ್ಪ ಹಿರೇಮನಿ, ಮೈಲಪ್ಪ ವಡ್ಡಟ್ಟಿ ಇದ್ದರು.

ಇದಕ್ಕೂ ಮುನ್ನ ಮುಂಡರಗಿ ಸ್ವಾಗತ ಕಮಾನು ಬಳಿ ಸಚಿವರಿಗೆ ಪುರಸಭೆ ಅಧ್ಯಕ್ಷೆ ಕವಿತಾ ಉಳ್ಳಾಗಡ್ಡಿ, ಎಪಿಎಂಸಿ ಅಧ್ಯಕ್ಷ ರವೀಂದ್ರ ಉಪ್ಪಿನಬೆಟಗೇರಿ, ಪುರಸಭೆ ಉಪಾಧ್ಯಕ್ಷ ಶಿವಪ್ಪ ಚಿಕ್ಕಣ್ಣವರ, ಸದಸ್ಯ ಲಿಂಗರಾಜಗೌಡ ಪಾಟೀಲ, ಟಿ.ಬಿ.ದಂಡಿನ, ಪವನ ಮೇಟಿ, ಪ್ರಹ್ಲಾದ ಹೊಸಮನಿ ಇತರರು ಹೂಮಾಲೆ ಹಾಕಿ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.