ಗದಗ: ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ್ ಎಸ್.ಎನ್. ಅವರ ಮನೆ ಹಾಗೂ ಕಚೇರಿ ಮೇಲೆ ಗುರುವಾರ ಬೆಳಿಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಸಂಪಾದನೆ ಹಿನ್ನೆಲೆಯಲ್ಲಿ ದಾಳಿ ನಡೆದಿದ್ದು, ನಗರದ ಕಂದಾಯ ಇಲಾಖೆ ಅಧಿಕಾರಿಗಳ ಬಡಾವಣೆಯಲ್ಲಿ ಇರುವ ಅವರ ಮನೆ ಹಾಗೂ ಕಚೇರಿ ಮೇಲೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡಸಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿರುವ ಅವರ ಮನೆಯಲ್ಲೂ ಅಧಿಕಾರಿಗಳು ಶೋಧ ನಡೆಸಿದ್ದಾರೆ.
ಗದುಗಿನಲ್ಲಿರುವ ಅವರ ಮನೆಯಲ್ಲಿ 400 ಗ್ರಾಂ ಚಿನ್ನ, ₹1 ಲಕ್ಷ ಹಣ ದೊರಕಿದೆ. ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.