ADVERTISEMENT

ಗದಗ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಸವಾರನ ತಲೆ ಮೇಲೆ ಹರಿದ ಬಸ್

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2025, 16:21 IST
Last Updated 14 ಮಾರ್ಚ್ 2025, 16:21 IST

ಗದಗ: ಬೈಕ್ ಸ್ಕಿಡ್ ಆಗಿ ಸವಾರರೊಬ್ಬರು ಆಯ ತಪ್ಪಿ ರಸ್ತೆ ಮೇಲೆ ಬಿದ್ದ ಪರಿಣಾಮ, ಬಸ್ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಮುಳಗುಂದ ನಾಕಾದ ಬಸ್ ಡಿಪೊ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

ತಾಲ್ಲೂಕಿನ ಬೆನಕೊಪ್ಪ ಗ್ರಾಮದ ಈರಪ್ಪ ಕಲ್ಲಪ್ಪ ಕಣಗಿನಹಾಳ (50) ಮೃತರು. ಅವರು ಮಾರುಕಟ್ಟೆಯಿಂದ ಹುಬ್ಬಳ್ಳಿ ರಸ್ತೆ ಕಡೆಗೆ ಹೊರಟಿದ್ದರು ಎನ್ನಲಾಗಿದೆ.

ಮುಳಗುಂದ ನಾಕಾ ಬಳಿ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದಾಗ, ಏಕಾಏಕಿ ಆಯತಪ್ಪಿ ಸವಾರ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಪಕ್ಕದಲ್ಲಿದ್ದ ಗದಗ– ಹಾನಗಲ್ ಮಾರ್ಗವಾಗಿ ಹೊರಟಿದ್ದ ಬಸ್‌ನ ಹಿಂಬದಿ ಚಕ್ರ ಬೈಕ್ ಸವಾರನ ತಲೆ ಮೇಲೆ ಹರಿದ ಪರಿಣಾಮ ತಲೆ ಅಪ್ಪಚ್ಚಿಯಾಗಿ, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ADVERTISEMENT

ಘಟನೆ ಬಳಿಕ ಸ್ಥಳದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರಿಂದ ಸಂಚಾರ ದಟ್ಟಣೆ ಉಂಟಾಗಿ, ಪೊಲೀಸರು ಹರಸಾಹಸ ಪಡಬೇಕಾಯಿತು. ಗದಗ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.