ADVERTISEMENT

ನರಗುಂದ | ಕಾರು–ಬಸ್‌ ಡಿಕ್ಕಿ: ಒಂದೇ ಕುಟುಂಬದ ನಾಲ್ವರ ಸಾವು

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2024, 1:13 IST
Last Updated 19 ಆಗಸ್ಟ್ 2024, 1:13 IST
   

ನರಗುಂದ (ಗದಗ): ತಾಲ್ಲೂಕಿನ ಕೊಣ್ಣೂರ ಬಳಿ ಭಾನುವಾರ ನಸುಕಿನಲ್ಲಿ ಕೆಎಸ್ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.

ಹಾವೇರಿಯ ರುದ್ರಪ್ಪ ಬಾಬಣ್ಣ ಅಂಗಡಿ (58) ಅವರ ಪತ್ನಿ ರಾಜೇಶ್ವರಿ (50), ಪುತ್ರಿ ಐಶ್ವರ್ಯ (18) ಹಾಗೂ ಪುತ್ರ ವಿಜಯಕುಮಾರ್ (14) ಮೃತರು. ಅಪಘಾತದಿಂದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರು. ತೀವ್ರ ಗಾಯ ಗೊಂಡಿದ್ದ ರಾಜೇಶ್ವರಿ ಅವರನ್ನು ಆಂಬುಲೆನ್ಸ್ ಮೂಲಕ ನರಗುಂದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲಿ ಅಸುನೀಗಿದರು.

‘ಹಾವೇರಿಯಿಂದ ಕೊಣ್ಣೂರ ಮಾರ್ಗವಾಗಿ 5 ಕಿ.ಮೀ ದೂರದಲ್ಲಿನ ಕಲ್ಲಾಪುರದ ಬಸವಣ್ಣ ದೇವರ ದೇವಸ್ಥಾನಕ್ಕೆ ಹೊರಟಿದ್ದರು. ಈ ವೇಳೆ ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ. ಅಪಘಾತಕ್ಕೆ ಕಾರು ಚಲಾಯಿಸುತ್ತಿದ್ದ ರುದ್ರಪ್ಪ ಅವರ ನಿರ್ಲಕ್ಷ್ಯವೇ ಕಾರಣ’ ಎಂದು ಪೊಲೀಸರು ತಿಳಿಸಿದ್ದಾರೆ.  ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.