ADVERTISEMENT

ಚಾಮರಾಜನಗರ: 143ಕ್ಕೆ ಇಳಿದ ಕೋವಿಡ್-19 ಸಕ್ರಿಯ ಪ್ರಕರಣ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2021, 16:43 IST
Last Updated 18 ಆಗಸ್ಟ್ 2021, 16:43 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್‌ ಸಕ್ರಿಯ ಪ್ರಕರಣಗಳ ಸಂಖ್ಯೆ 150ಕ್ಕಿಂತಲೂ ಕೆಳಗೆ ಇಳಿದಿದೆ. ಬುಧವಾರ 32 ಮಂದಿ ಗುಣಮುಖರಾಗಿದ್ದು, ಸದ್ಯ 143 ಸೋಂಕಿತರಿದ್ದಾರೆ.ಈ ಪೈಕಿ ಐವರು ಐಸಿಯುನಲ್ಲಿ ಹಾಗೂ 29 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಹೊಸದಾಗಿ ಏಳು ಮಂದಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. ಒಬ್ಬರು ಮೃತಪಟ್ಟಿದ್ದಾರೆ.

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 32,234ಕ್ಕೆ ಏರಿದೆ. 31,559 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌, ಕೋವಿಡ್‌ಯೇತರ ಕಾರಣಗಳಿಂದ ಈವರೆಗೆ 573 ಸೋಂಕಿತರು ಮೃತಪಟ್ಟಿದ್ದಾರೆ.

ADVERTISEMENT

ಬುಧವಾರ ದಾಖಲೆಯ 2002 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 1,994 ವರದಿಗಳು ನೆಗಟಿವ್‌ ಬಂದು ಎಂಟು ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಈ ಪೈಕಿ ಒಂದು ಪ್ರಕರಣ ಹೊರ ಜಿಲ್ಲೆಗೆ ಸೇರಿದೆ.

ಏಳು ಮಂದಿ ಸೋಂಕಿತರಲ್ಲಿ ಚಾಮರಾಜನಗರ ಮತ್ತು ಹನೂರು ತಾಲ್ಲೂಕುಗಳ ತಲಾ ಮೂವರು ಹಾಗೂ ಕೊಳ್ಳೇಗಾಲದ ಒಬ್ಬರು ಇದ್ದಾರೆ.

ಗುಣಮುಖರಾದ 32 ಮಂದಿಯಲ್ಲಿ ಚಾಮರಾಜನಗರ ತಾಲ್ಲೂಕಿನ 18, ಹನೂರು ತಾಲ್ಲೂಕಿನ 12 ಹಾಗೂ ಗುಂಡ್ಲುಪೇಟೆ ಹಾಗೂ ಕೊಳ್ಳೇಗಾಲ ತಾಲ್ಲೂಕುಗಳ ತಲಾ ಒಬ್ಬರು ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.