
ಗದಗ: ‘ಸಂವಿಧಾನದ ಮೂಲಕ ಸಾಮಾಜಿಕ ಅಸಮಾನತೆ ಹೋಗಲಾಡಿಸುವುದು ಡಾ. ಬಿ.ಆರ್.ಅಂಬೇಡ್ಕರ್ ಅವರ ಉದ್ದೇಶವಾಗಿತ್ತು’ ಎಂದು ಸತೀಶ್ ಪಾಸಿ ಹೇಳಿದರು.
ಲಿಂಗಾಯತ ಪ್ರಗತಿಶೀಲ ಸಂಘದ ಆಶ್ರಯದಲ್ಲಿ ನಗರದ ತೋಂಟದಾರ್ಯ ಮಠದಲ್ಲಿ ಈಚೆಗೆ ನಡೆದ 2,774ನೇ ಶಿವಾನುಭವ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.
‘ಸಂವಿಧಾನದ ಅಡಿಯಲ್ಲಿ ಎಲ್ಲರೂ ಸಮಾನರು. ಸಮಾಜದಲ್ಲಿ ಅಸಮಾನತೆ, ಮೇಲು-ಕೀಳು ಭಾವನೆ ಇನ್ನೂ ಇದೆ. ಜಾತೀಯತೆ ಎಲ್ಲ ಕಡೆ ತಾಂಡವವಾಡುತ್ತಿದೆ. ಇದರಿಂದಾಗಿ, ಡಾ. ಬಿ.ಆರ್.ಅಂಬೇಡ್ಕರ್ ಮತ್ತು ಸಂವಿಧಾನದ ಆಶಯ ಈಡೇರುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.
‘ಸಂವಿಧಾನವೇ ನಮಗೆ ಪವಿತ್ರ ಗ್ರಂಥ. ಇದು ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣದ ಅವಕಾಶ ದೊರಕಿಸಿಕೊಟ್ಟಿದೆ. ನಮ್ಮದು ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯ. ಇದನ್ನು ಸರಿಯಾಗಿ ಅರ್ಥಮಾಡಿಕೊಂಡಾಗ ಮಾತ್ರ ಸಂವಿಧಾನ ದಿನಾಚರಣೆಗೆ ಸಾರ್ಥಕತೆ ಬರುತ್ತದೆ’ ಎಂದರು.
ನಿವೃತ್ತ ಶಿಕ್ಷಕ ಬಿ.ಕೆ. ನಿಂಬನಗೌಡ್ರ ಅವರನ್ನು ಸನ್ಮಾನಿಸಲಾಯಿತು. ಮೃತ್ಯುಂಜಯ ಹಿರೇಮಠ ಹಾಗೂ ಗುರುನಾಥ್ ಸುತಾರ ವಚನ ಸಂಗೀತ ನೆಡೆಸಿಕೊಟ್ಟರು. ಅಭಿಷೇಕ ಹುಬ್ಬಳ್ಳಿ ಧಾರ್ಮಿಕಗ್ರಂಥ ಪಠಿಸಿದರು. ಶ್ರದ್ಧಾ ಹೂಲಿ ವಚನ ಚಿಂತನ ಪ್ರಸ್ತುತಪಡಿಸಿದರು.
ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಬಾಲಚಂದ್ರ ಭರಮಗೌಡ್ರ, ಉಪಾಧ್ಯಕ್ಷ ಡಾ. ಉಮೇಶ ಪುರದ ಹಾಗೂ ವಿದ್ಯಾ ಪ್ರಭು ಗಂಜಿಹಾಳ, ಕಾರ್ಯದರ್ಶಿ ವೀರಣ್ಣ ಗೋಟಡಕಿ, ಸಹಕಾರ್ಯದರ್ಶಿ ಸೋಮಶೇಖರ ಪುರಾಣಿಕ ಹಾಗೂ ನಾಗರಾಜ್ ಹಿರೇಮಠ, ಸಂಘಟನಾ ಕಾರ್ಯದರ್ಶಿ ಮಹೇಶ್ ಗಾಣಿಗೇರ, ಕೋಶಾಧ್ಯಕ್ಷ ಬಸವರಾಜ ಕಾಡಪ್ಪನವರ ಹಾಗೂ ಶಿವಾನುಭವ ಸಮಿತಿ ಸಹಚೇರ್ಮನ್ ಶಿವಾನಂದ ಹೊಂಬಳ ಹಾಗೂ ಮಠದ ಭಕ್ತರು ಇದ್ದರು.
ಆ ಜಾತಿ. ಈ ಜಾತಿ. ನೂರೆಂಟು ಜಾತಿಗಳ ಜಂಜಾಟ ಬಿಟ್ಟು ಸಂವಿಧಾನದ ಮೂಲ ಆಶಯವಾದ ಜಾತ್ಯಾತೀತ. ಪ್ರಜಾಸತ್ತಾತ್ಮಕ ರಾಷ್ಟ್ರದ ಸಮೃದ್ಧ ಕಲ್ಪನೆಗೆ ಬಲಿಷ್ಟ ಭಾರತ ನಿರ್ಮಾಣಕ್ಕೆ ಭಾರತೀಯರೆಲ್ಲರೂ ಬದ್ಧರಾಗಬೇಕು
–ಐ.ಬಿ.ಬೆನಕೊಪ್ಪ ಶಿವಾನುಭವ ಸಮಿತಿ ಚೇರ್ಮನ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.