ADVERTISEMENT

ಗದಗ| ಅಂಬೇಡ್ಕರ್ ಜೀವನವೇ ಹೋರಾಟದ ಸಂಕೇತ: ಪ್ರೊ. ಸುರೇಶ ವಿ.ನಾಡಗೌಡರ

ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದಲ್ಲಿ ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2025, 5:21 IST
Last Updated 7 ಡಿಸೆಂಬರ್ 2025, 5:21 IST
<div class="paragraphs"><p>ಗದುಗಿನ ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ವಿಶ್ವವಿದ್ಯಾಲಯದಲ್ಲಿ ನಡೆದ ಬಿ.ಆರ್‌.ಅಂಬೇಡ್ಕರ್‌ ಮಹಾ ಪರಿನಿರ್ವಾಣ&nbsp;ದಿನಾಚರಣೆಯಲ್ಲಿ ಪ್ರಭಾರ ಕುಲಪತಿ ಪ್ರೊ. ಸುರೇಶ ವಿ.ನಾಡಗೌಡರ ಮಾತನಾಡಿದರು</p></div>

ಗದುಗಿನ ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ವಿಶ್ವವಿದ್ಯಾಲಯದಲ್ಲಿ ನಡೆದ ಬಿ.ಆರ್‌.ಅಂಬೇಡ್ಕರ್‌ ಮಹಾ ಪರಿನಿರ್ವಾಣ ದಿನಾಚರಣೆಯಲ್ಲಿ ಪ್ರಭಾರ ಕುಲಪತಿ ಪ್ರೊ. ಸುರೇಶ ವಿ.ನಾಡಗೌಡರ ಮಾತನಾಡಿದರು

   

ಗದಗ: ‘ಡಾ. ಬಿ.ಆರ್‌.ಅಂಬೇಡ್ಕರ್ ಅವರ ಜೀವನವೇ ಜ್ಞಾನ, ಶ್ರಮ, ಮಾನವೀಯತೆ ಮತ್ತು ಅಸಮಾನತೆಯ ವಿರುದ್ಧದ ಹೋರಾಟದ ಸಂಕೇತ. ಅವರ ಚಿಂತನೆಗಳು ಇಂದಿಗೂ ಸಮಾಜ ಪರಿವರ್ತನೆಗೆ ದಿಕ್ಕು ತೋರಿಸುತ್ತಿವೆ’ ಎಂದು ಪ್ರಭಾರ ಕುಲಪತಿ ಪ್ರೊ. ಸುರೇಶ ವಿ.ನಾಡಗೌಡರ ಹೇಳಿದರು.

ನಗರದ ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಶನಿವಾರ ನಡೆದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನಾಚರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ADVERTISEMENT

‘ಡಾ. ಬಿ.ಆರ್‌.ಅಂಬೇಡ್ಕರ್ ಸಾಮಾಜಿಕ ನ್ಯಾಯ, ಮಾನವ ಹಕ್ಕುಗಳು ಹರಿಕಾರರು. ಸಂವಿಧಾನದ ಮೌಲ್ಯಗಳನ್ನು ಕೇವಲ ಓದುವುದಲ್ಲ; ಜೀವನದಲ್ಲಿ ಅಳವಡಿಸಿಕೊಳ್ಳುವುದೇ ನಿಜವಾದ ಗೌರವ’ ಎಂದರು.

ವಿಶ್ವವಿದ್ಯಾಲಯದ ಶೈಕ್ಷಣಿಕ ಚಟುವಟಿಕೆಗಳ ವಿಶೇಷಾಧಿಕಾರಿ ಎಂ.ಬಿ.ಚನ್ನಪ್ಪಗೌಡರ, ಆಡಳಿತಾಧಿಕಾರಿ ಶಶಿಭೂಷಣ ದೇವುರ ಹಾಗೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಅಧ್ಯಾಪಕರು, ಸಿಬ್ಬಂದಿ ಹಾಗೂ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದ ಸರ್ಟಿಫಿಕೇಟ್ ಕೋರ್ಸ್‌ನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಸಂಯೋಜಕ ಪ್ರಕಾಶ್ ಮಾಚೇನಹಳ್ಳಿ ಕಾರ್ಯಕ್ರಮ ನಿರ್ವಹಿಸಿದರು.

ಶೋಷಿತರ ಏಳಿಗೆಗೆ ಜೀವನವನ್ನೇ ಮುಡುಪಾಗಿಟ್ಟ ಮಹಾನ್ ಹೋರಾಟಗಾರ ಡಾ. ಬಿ.ಆರ್‌.ಅಂಬೇಡ್ಕರ್. ಅವರ ಪುಣ್ಯತಿಥಿಯನ್ನು ಮಹಾಪರಿನಿರ್ವಾಣ ದಿನ ಎಂದು ರಾಷ್ಟ್ರದಾದ್ಯಂತ ಆಚರಿಸಲಾಗುವುದು. ಸಂವಿಧಾನ ಗೌರವಿಸುವ ಮೂಲಕ ಅವರಿಗೆ ನಮನ ಸಲ್ಲಿಸಬೇಕಿದೆ
ಡಾ.ರಾಜೇಂದ್ರ ಎಸ್ ಗಡಾದ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.