ADVERTISEMENT

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಾಲವಿಜ್ಞಾನಿಗಳಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 28 ಜನವರಿ 2024, 15:43 IST
Last Updated 28 ಜನವರಿ 2024, 15:43 IST
ರಾಷ್ಟ್ರ ಮಟ್ಟದ ವಿಜ್ಞಾನ ಸ್ಪರ್ಧೆಗೆ ಆಯ್ಕೆಯಾದ ವಿದ್ಯಾರ್ಥಿಗಳುನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ.ಪಾಟೀಲ ಸನ್ಮಾನಿಸಿದರು. ವಿಧಾನ ಪರಿಷತ್‌ ಸದಸ್ಯ ಎಸ್‌.ವಿ.ಸಂಕನೂರ ಉಪಸ್ಥಿತರಿದ್ದರು
ರಾಷ್ಟ್ರ ಮಟ್ಟದ ವಿಜ್ಞಾನ ಸ್ಪರ್ಧೆಗೆ ಆಯ್ಕೆಯಾದ ವಿದ್ಯಾರ್ಥಿಗಳುನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ.ಪಾಟೀಲ ಸನ್ಮಾನಿಸಿದರು. ವಿಧಾನ ಪರಿಷತ್‌ ಸದಸ್ಯ ಎಸ್‌.ವಿ.ಸಂಕನೂರ ಉಪಸ್ಥಿತರಿದ್ದರು   

ಗದಗ: ಕಲಬುರಗಿಯ ಸೇಡಂನಲ್ಲಿ ನಡೆದ 31ನೇ ರಾಜ್ಯಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಗದಗ ಜಿಲ್ಲೆಯ ವಿದ್ಯಾರ್ಥಿನಿಯರು ಮಂಡಿಸಿದ ವಿಜ್ಞಾನ ಯೋಜನೆಯು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದು, ಸಾಧನೆ ಮೆರೆದ ವಿದ್ಯಾರ್ಥಿಗಳನ್ನು ಗದಗ ಜಿಲ್ಲಾ ಕ್ರೀಡಾಂಗಣದಲ್ಲಿ ಸನ್ಮಾನಿಸಲಾಯಿತು.

‘ಅಳಿವಿನ ಅಂಚಿನಲ್ಲಿರುವ ಸಸ್ಯಗಳು ಔಷಧೀಯ ಮುತ್ತುಗಳು’ ಯೋಜನೆ ಕುರಿತು ಶಿರಹಟ್ಟಿಯ ಫಕ್ಕೀರ ಚನ್ನವೀರೇಶ್ವರ ಇಂಗ್ಲಿಷ್ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿಯರಾದ ಪೂಜಾ ಕೆ. ಸ್ವಾಮಿ ಹಾಗೂ ಸಂತೃಪ್ತಿ ಎಂ.ಮಾಬಳಿ ವಿಜ್ಞಾನ ಶಿಕ್ಷಕ ಏಕಾಂತ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಯೋಜನೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ, ವಿಧಾನ ಪರಿಷತ್‌ ಸದಸ್ಯ ಎಸ್.ವಿ.ಸಂಕನೂರ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್., ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ ರಾಜ್ಯ ಕಾರ್ಯಕಾರಿ ಮಂಡಳಿ ಸದಸ್ಯ ಅನ್ನದಾನೇಶ್ವರ ಹಳ್ಳಿಕೇರಿ, ಜಿಲ್ಲಾ ಸಂಯೋಜಕ ಜಗದೀಶ ಯಾಳಗಿ, ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಹಳೇರಿತ್ತಿ, ಪ್ರಧಾನ ಕಾರ್ಯದರ್ಶಿ ವೀರನಗೌಡ ಮರಿಗೌಡರ್, ಎನ್.ವಿ.ಜೋಷಿ ಜಿಲ್ಲಾ ಘಟಕದ ಪದಾಧಿಕಾರಿಗಳು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.