ADVERTISEMENT

ಮುಂಡರಗಿ | ರೈಲು ಮಾರ್ಗ ಮಂಜೂರಾತಿಗೆ ಆಗ್ರಹ: ಪ್ರತಿಭಟನೆ ಡಿ.11ರಂದು

ದೆಹಲಿ ಚಲೋ ಪ್ರತಿಭಟನೆಗೆ ಚಾಲನೆ ನೀಡಿದ ಅನ್ನದಾನೀಶ್ವರ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2025, 4:57 IST
Last Updated 10 ಡಿಸೆಂಬರ್ 2025, 4:57 IST
ಗದಗ-ಹರಪನಹಳ್ಳಿ ರೈಲು ಮಾರ್ಗ ಮಂಜೂರಾತಿಗೆ ಆಗ್ರಹಿಸಿ ಮುಂಡರಗಿಯ ವಿವಿಧ ಸಂಘಟನೆ ವತಿಯಿಂದ ಕೈಗೊಂಡಿರುವ ದೆಹಲಿ ಚಲೋ ಪ್ರತಿಭಟನೆಗೆ ಅನ್ನದಾನೀಶ್ವರ ಸ್ವಾಮೀಜಿ ಚಾಲನೆ ನೀಡಿದರು
ಗದಗ-ಹರಪನಹಳ್ಳಿ ರೈಲು ಮಾರ್ಗ ಮಂಜೂರಾತಿಗೆ ಆಗ್ರಹಿಸಿ ಮುಂಡರಗಿಯ ವಿವಿಧ ಸಂಘಟನೆ ವತಿಯಿಂದ ಕೈಗೊಂಡಿರುವ ದೆಹಲಿ ಚಲೋ ಪ್ರತಿಭಟನೆಗೆ ಅನ್ನದಾನೀಶ್ವರ ಸ್ವಾಮೀಜಿ ಚಾಲನೆ ನೀಡಿದರು   

ಮುಂಡರಗಿ: ‘ಗದಗ-ಹರಪನಹಳ್ಳಿ ರೈಲು ಮಾರ್ಗ ಮಂಜೂರಾತಿಗೆ ಇಲ್ಲಿಯ ವಿವಿಧ ಸಂಘಟನೆಗಳು ನಡೆಸುತ್ತಿರುವ ಹೋರಾಟ ಶ್ಲಾಘನೀಯ. ರೈಲು ಮಂಜೂರಾತಿಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಅನ್ನದಾನೀಶ್ವರ ಸ್ವಾಮೀಜಿ ಒತ್ತಾಯಿಸಿದರು.

ಗದಗ, ಮುಂಡರಗಿ, ಹೂವಿನಹಡಗಲಿ, ಹರಪನಹಳ್ಳಿ ಮಾರ್ಗವಾಗಿ ನೂತನ ರೈಲು ಮಾರ್ಗ ಮಂಜೂರಾತಿಗೆ ಆಗ್ರಹಿಸಿ ತಾಲ್ಲೂಕು ಸಾರ್ವಜನಿಕ ಹೋರಾಟ ವೇದಿಕೆ, ತಾಲ್ಲೂಕು ರೇಲ್ವೆ ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆ ಕಾರ್ಯಕರ್ತರು ಮಂಗಳವಾರ ಹಮ್ಮಿಕೊಂಡಿದ್ದ ದೆಹಲಿ ಚಲೋ ಪ್ರತಿಭಟನೆಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ರೈಲು ಮಾರ್ಗ ಮಂಜೂರಾತಿಗೆ ಆಗ್ರಹಿಸಿ ರೈಲ್ವೆ ಸಚಿವ ಸೋಮಣ್ಣ‌ ಅವರಿಗೆ ಮನವಿ ಪತ್ರ ಸಲ್ಲಿಸಬೇಕು. ವಿದ್ಯಾ ಸಮಿತಿ ಶತಮಾನೋತ್ಸವ ಸಮಾರಂಭದಲ್ಲಿ ಸೋಮಣ್ಣ ಸೇರಿದಂತೆ ಹಲವು ಸಚಿವರು ಆಗಮಿಸಲಿದ್ದಾರೆ. ಈ ಕುರಿತು ಅವರೊಂದಿಗೆ ಚರ್ಚಿಸಲಾಗುವುದು’ ಎಂದು ತಿಳಿಸಿದರು.

ADVERTISEMENT

ನೂತನ ರೈಲು ಮಾರ್ಗ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಬಸವರಾಜ ನವಲಗುಂದ ಮಾತನಾಡಿ, ‘ರೈಲು ಮಾರ್ಗ ಮಂಜೂರಾತಿಗೆ ಒತ್ತಾಯಿಸಿ 17 ವರ್ಷಗಳಿಂದ ವಿವಿಧ ರೀತಿಯ ಹೋರಾಟ ಕೈಗೊಳ್ಳಲಾಗಿದೆ. ಆದರೂ ರಾಜ್ಯ ಹಾಗೂ ಕೇಂದ್ರ ಸರ್ಕಾರ ಈ ಕುರಿತು ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ವಿಷಾದಿಸಿದರು.

ದ್ರುವಕುಮಾರ ಹುಗಾರ, ಸಚಿನ್ ಸೇಸಾಯಿ, ರವಿಗೌಡ ಪಾಟಿಲ, ವೀರಭದ್ರಪ್ಪ ಕಬ್ಬಿಣದ, ಮಾಬುಸಾಬ್ ಎಲಿಗಾರ, ಹನುಮಂತಪ್ಪ ಚಾಕಲಬ್ಬಿ, ರಾಜಾಭಕ್ಷಿ ಬೆಟಗೇರಿ, ಜಗದೀಶ, ಸುರೇಶ ಕುಂಬಾರ, ಮೈನುದ್ದೀನ ಗರಡಿಮನಿ ಇದ್ದರು.

ಪ್ರತಿಭಟನೆಗೆ ಸ್ವಾಮೀಜಿ ಚಾಲನೆ
ಗದಗ-ಹರಪನಹಳ್ಳಿ ರೈಲು ಮಾರ್ಗ ಮಂಜೂರಾತಿಗೆ ಆಗ್ರಹಿಸಿ ಡಿ.11ರಂದು ದೆಹಲಿಯಲ್ಲಿ ಪ್ರತಿಭಟನೆ ಕೈಗೊಳ್ಳಲಾಗಿದ್ದು ಸಾವಿರಾರು ಕಾರ್ಯಕರ್ತರು ಹೋರಾಟದಲ್ಲಿ ಪಾಲ್ಗೊಳ್ಳಲು ಡಿ.9ರಂದು ಟಿಕೇಟ್ ರಹಿತ ಪ್ರಯಾಣ ಕೈಗೊಳ್ಳಲಿದ್ದಾರೆ’ ಎಂದು ರೈಲ್ವೆ ಹೋರಾಟ ಸಮಿತಿ ಅಧ್ಯಕ್ಷ ಬಸವರಾಜ ದೇಸಾಯಿ ಮಾತನಾಡಿ  ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.