ರೋಣ: ‘ಆರೋಗ್ಯ ಇಲಾಖೆ ಮತ್ತು ವಿವಿಧ ಇಲಾಖೆಗಳ ಸಹಕಾರದೊಂದಿಗೆ ಮಲೇರಿಯಾ ರೋಗ ನಿರ್ಮೂಲನೆಗೊಳಿಸಿ ಮಲೇರಿಯಾ ಮುಕ್ತ ತಾಲ್ಲೂಕು ಮಾಡಲು ಸಾರ್ವಜನಿಕರು ಸಹಕಾರ ನೀಡಬೇಕು’ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಎಚ್.ಎಲ್ ಗಿರಡ್ಡಿ ಹೇಳಿದರು.
ಪಟ್ಟಣದ ರಾಜೀವ್ ಗಾಂಧಿ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ ಹಾಗೂ ವಿವಿಧ ಕಾರ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲ್ಲೂಕು ಮಟ್ಟದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಬಿ.ಎಸ್ ಭಜಂತ್ರಿ, ರೋಣ ನಗರದ ಮಕ್ಕಳ ತಜ್ಞ ಮಧು ರಡ್ಡೇರ, ಹೃದಯ ರೋಗ ತಜ್ಞ ನವೀನ ನಂದೆಪ್ಪಗೌಡರ, ಡಾ. ಲಕ್ಷ್ಮಣಸಾ ಬಾಕಳೆ ರೋಣ ಆಯುಷ್ ವೈದ್ಯರ ಸಂಘದ ಅಧ್ಯಕ್ಷರಾದ ಡಾ.ಗಿರಿಧರ್ ಕೊಳ್ಳಿ, ರಾಜೀವ್ ಗಾಂಧಿ ಮಹಾವಿದ್ಯಾಲಯದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು. ಕಾರ್ಯಕ್ರಮದಲ್ಲಿ ಮಲೇರಿಯಾ ರೋಗದ ಬಗ್ಗೆ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು.
‘ರೋಗ ನಿಯಂತ್ರಣಕ್ಕೆ ಮುಂಜಾಗ್ರತೆ ವಹಿಸಿ’
ಮಳೆಗಾಲದಲ್ಲಿ ಅನಾಫಿಲೀಸ್ ಸೊಳ್ಳೆಗಳು ಉತ್ಪತ್ತಿ ಹೆಚ್ಚಾಗಿ ಕಾಯಿಲೆ ಹರಡುವ ಸಾಧ್ಯತೆ ಇದೆ. ಸಾರ್ವಜನಿಕರು ಸೊಳ್ಳೆಗಳ ನಿಯಂತ್ರಣಕ್ಕಾಗಿ ಜೈವಿಕ ನಿಯಂತ್ರಣ ವಿಧಾನ ಮತ್ತು ರಾಸಾಯನಿಕ ವಿಧಾನಗಳು ಲಭ್ಯವಿದೆ. ಆರೋಗ್ಯ ಇಲಾಖೆಯವರ ಸಲಹೆ ಸಹಕಾರದೊಂದಿಗೆ ಸೊಳ್ಳೆಗಳನ್ನು ನಿಯಂತ್ರಿಸಲು ಸಾಧ್ಯ. ರೋಗ ಲಕ್ಷಣಗಳು ಕಂಡ ಕೂಡಲೇ ಚಿಕಿತ್ಸೆ ಪಡೆಯಬೇಕು’ ಎಂದು ವೈದ್ಯ ಎಸ್.ಬಿ. ಲಕ್ಕೋಳ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.