ADVERTISEMENT

ಬಾಲಗೌರವ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 29 ಜನವರಿ 2026, 7:24 IST
Last Updated 29 ಜನವರಿ 2026, 7:24 IST
<div class="paragraphs"><p>ಪ್ರಾತಿನಿಧಿಕ ಪತ್ರ</p></div>

ಪ್ರಾತಿನಿಧಿಕ ಪತ್ರ

   

ಗದಗ: ಕರ್ನಾಟಕ ಬಾಲವಿಕಾಸ ಅಕಾಡೆಮಿ ವತಿಯಿಂದ 2024-25 ಹಾಗೂ 2025-26ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಸಾಧನೆ ಮಾಡಿದ 18 ವರ್ಷದ ಒಳಗಿನ ಮಕ್ಕಳಿಂದ ಬಾಲಗೌರವ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಮಕ್ಕಳು ಕ್ರೀಡೆ, ಸಂಗೀತ, ನೃತ್ಯ, ಬಹುಮುಖ ಪ್ರತಿಭೆ, ನಟನೆ, ಚಿತ್ರಕಲೆ, ಹಾಗೂ ವಿಜ್ಞಾನ ಮತ್ತು ಸಂಶೋಧನೆ ಯಾವುದಾದರೂ ಒಂದು ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿ ಪ್ರಶಸ್ತಿ ಪಡೆದಿರಬೇಕು.

ADVERTISEMENT

ಇಂತಹ ಮಕ್ಕಳು ಅಕಾಡೆಮಿ ಬಾಲಗೌರವ ಪ್ರಶಸ್ತಿಗಾಗಿ ತಮ್ಮ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ಫೆಬ್ರುವರಿ 20ರೊಳಗಾಗಿ ಅಕಾಡೆಮಿಯ ಕೇಂದ್ರ ಕಚೇರಿಗೆ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ.

ಗದಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪ ನಿರ್ದೇಶಕರ ಕಚೇರಿ ಹಾಗೂ ಆಕಾಡೆಮಿಯ ಕೇಂದ್ರ ಕಚೇರಿಯಲ್ಲಿ ಅರ್ಜಿ ನಮೂನೆ ಲಭ್ಯವಿದೆ.

ಕೇಂದ್ರ ಕಚೇರಿ ವಿಳಾಸ: ಯೋಜನಾಧಿಕಾರಿ, ಚಂದ್ರಿಕಾ ಲೇಔಟ್ ಹಿಂಭಾಗ, ಕೆಎಚ್‌ಬಿ ಕಾಲೊನಿ, ಲಕಮನಹಳ್ಳಿ, ಧಾರವಾಡ-580004. ದೂರವಾಣಿ ಸಂಖ್ಯೆ: 0836-2465490.  ಮಾಹಿತಿಗೆ 80503 92209, ಸಂಪರ್ಕಿಸುವಂತೆ ಪ್ರಕಟಣೆ ಕೋರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.