ADVERTISEMENT

ಲಕ್ಷ್ಮೇಶ್ವರ: ಪೊಲೀಸ್ ಕಾನ್‌ಸ್ಟೆಬಲ್‌ ಮೇಲೆ ಹಲ್ಲೆ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2024, 15:54 IST
Last Updated 3 ಮಾರ್ಚ್ 2024, 15:54 IST

ಲಕ್ಷ್ಮೇಶ್ವರ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದವರು ತಾಲ್ಲೂಕಿನ ರಾಮಗೇರಿ ಗ್ರಾಮದ ಚೆಕ್‍ಪೋಸ್ಟ್‌ನಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸ್ ಕಾನ್‌ಸ್ಟೆಬಲ್‌ ಮೇಲೆ ಹಲ್ಲೆ ನಡೆಸಿರುವ ಘಟನೆ ಭಾನುವಾರ ನಡೆದಿದೆ.

ಕಾನ್‌ಸ್ಟೆಬಲ್‌ ಎಚ್.ಎನ್. ಗೊರವರ ಹಲ್ಲೆಗೆ ಒಳಗಾದವರು. ಹಲ್ಲೆ ಮಾಡಿದವರು ವಾಹನ ಸಮೇತ ಅಲ್ಲಿಂದ ಪರಾರಿ ಆಗಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT