
ಪ್ರಜಾವಾಣಿ ವಾರ್ತೆ
ರೋಣ (ಗದಗ ಜಿಲ್ಲೆ): ಭಾನುವಾರ ತಡರಾತ್ರಿ ತಮ್ಮ ಕೊಲೆಗೆ ಯತ್ನ ನಡೆದಿದೆ ಎಂದು ರೋಣ ತಹಶೀಲ್ದಾರ್ ನಾಗರಾಜ ಕೆ. ಅವರು ರೋಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಇಬ್ಬರು ಆರೋಪಿಗಳ ಬಂಧನವಾಗಿದೆ.
‘ಪಟ್ಟಣದ ಹನುಮಂತ ಚಲವಾದಿ ಹಾಗೂ ಶರಣಪ್ಪ ಗದಗಿನ ಬಂಧಿತರು. ಹನುಮಂತ ತನ್ನ ಮೇಲಿರುವ ಪಿಎಆರ್ ಮುಕ್ತಾಯ ಮಾಡಲು ತಹಶೀಲ್ದಾರ್‌ರಿಗೆ ಬೆದರಿಕೆ ಹಾಕುವುದು, ಮಾಹಿತಿ ಕೇಳುವ ನೆಪದಲ್ಲಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡುತ್ತಿದ್ದ ಎಂಬುದು ಗೊತ್ತಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
‘ಇಬ್ಬರು ವಸತಿಗೃಹಕ್ಕೆ ಅತಿಕ್ರಮ ಪ್ರವೇಶಿಸಿ ಬೆದರಿಕೆ ಹಾಕಿದ್ದರು. ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಿ ಕತ್ತು ಹಿಸುಕಿ ಕೊಲೆಗೆ ಪ್ರಯತ್ನಿಸಿದ್ದಾರೆ’ ಎಂದು ತಹಶೀಲ್ದಾರ್ ದೂರು ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.