ADVERTISEMENT

ರೈತರ ಮನೆ ಬಾಗಿಲಿಗೆ ಸರ್ಕಾರ: ಬಿಸಿ ಪಾಟೀಲ್

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2021, 7:24 IST
Last Updated 10 ನವೆಂಬರ್ 2021, 7:24 IST
ನರಗುಂದ ದಲ್ಲಿ ಹುತಾತ್ಮ ರೈತ ವೀರಪ್ಪ ಕಡ್ಲಿಕೊಪ್ಪರ ವೀರಗಲ್ಲಿಗೆ ನಮನ ಸಲ್ಲಿಸಲು ಕೃಷಿ ಸಚಿವ ಬಿ.ಸಿ.ಪಾಟೀಲ,ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಆಗಮಿಸಿದರು.
ನರಗುಂದ ದಲ್ಲಿ ಹುತಾತ್ಮ ರೈತ ವೀರಪ್ಪ ಕಡ್ಲಿಕೊಪ್ಪರ ವೀರಗಲ್ಲಿಗೆ ನಮನ ಸಲ್ಲಿಸಲು ಕೃಷಿ ಸಚಿವ ಬಿ.ಸಿ.ಪಾಟೀಲ,ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಆಗಮಿಸಿದರು.   

ನರಗುಂದ: ರೈತರೊಂದಿಗೆ ಒಂದು ದಿನ ಕಾರ್ಯಕ್ರಮದ ಉದ್ದೇಶ ಸರ್ಕಾರವನ್ನು ರೈತರ ಮನೆ ಬಾಗಿಲಿಗೆ ಕರೆತರುವುದೇ ಆಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ಈ ಕಾರ್ಯಕ್ರಮ ಕಳೆದ ನವಂಬರ್ 14ರಿಂದ ಆರಂಭಗೊಂಡಿದ್ದು, ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನಲ್ಲಿ ನಡೆಯುತ್ತಿರುವ 11ನೇ ಕಾರ್ಯಕ್ರಮವಾಗಿದೆ. ನವಂಬರ್ 14ರಂದು ಹಾವೇರಿ ಜಿಲ್ಲೆಯಲ್ಲಿ ನಡೆಯಲಿದೆ ಎಂದರು.

ಈ ಕಾರ್ಯಕ್ರಮ ಪ್ರತಿ ಜಿಲ್ಲೆ, ತಾಲ್ಲೂಕಿನ ಪ್ರಗತಿಪರ ರೈತರ ಹೊಲಗಳಿಗೆ ನೇರವಾಗಿ ಭೇಟಿ ನೀಡಿ, ಅವರಿಗೆ ಆತ್ಮಸ್ಥೈರ್ಯ ತುಂಬುವ ಹಾಗೂ ಕೃಷಿಯಲ್ಲಿ ವೈಜ್ಞಾನಿಕ ತಾಂತ್ರಿಕತೆಯನ್ನು ಹೇಗೆ ಅಳವಡಿಸಬೇಕು ಎಂಬುದನ್ನು ತಿಳಿಸುವುದೇ ಆಗಿದೆ ಎಂದರು.

ADVERTISEMENT

ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ, ಸಂಸದ ಪಿ.ಸಿ. ಗದ್ದಿಗೌಡ್ರ, ಪುರಸಭೆ ಅಧ್ಯಕ್ಷೆ ಭಾವನಾ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.