ADVERTISEMENT

ಸತ್ಯ ಎತ್ತಿ ಹಿಡಿದ ತೀರ್ಪು: ಸಚಿವ ಸಿ.ಸಿ.ಪಾಟೀಲ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2020, 16:23 IST
Last Updated 30 ಸೆಪ್ಟೆಂಬರ್ 2020, 16:23 IST
ಸಿ.ಸಿ.ಪಾಟೀಲ
ಸಿ.ಸಿ.ಪಾಟೀಲ   

ಗದಗ: ‘1992ರ ಬಾಬರಿ ಮಸೀದಿ ಧ್ವಂಸ ಪ್ರಕರಣ ಪೂರ್ವ ನಿಯೋಜಿತವಲ್ಲ, ಅದೊಂದು ಆಕಸ್ಮಿಕ ಘಟನೆ ಎಂಬ ತೀರ್ಪು ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿನ ನಂಬಿಕೆಯನ್ನು ಗಟ್ಟಿಗೊಳಿಸಿದೆ’ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಹೇಳಿದ್ದಾರೆ.

‘ಬಿಜೆಪಿಯ ಭೀಷ್ಮ ಎಲ್.ಕೆ.ಅಡ್ವಾಣಿ, ಮಾಜಿ ಕೇಂದ್ರ ಸಚಿವರಾದ ಮುರಳಿ ಮನೋಹರ ಜೋಷಿ, ಮಾಜಿ ಕೇಂದ್ರ ಸಚಿವೆ ಉಮಾಭಾರತಿ ಹಾಗೂ ಮಾಜಿ ಸಂಸದರಾದ ವಿನಯ್ ಕಟಿಯಾರ್ ಸೇರಿದಂತೆ 32 ಜನರನ್ನು ಸಿಬಿಐ ವಿಶೇಷ ನ್ಯಾಯಾಲಯವು ನಿರ್ದೋಷಿ ಎಂದು ಘೋಷಿಸಿದೆ. ಈ ಪ್ರಕರಣದ ತೀರ್ಪು ಸತ್ಯವನ್ನು ಎತ್ತಿ ಹಿಡಿದಿದೆ’ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT