ಲಕ್ಷ್ಮೇಶ್ವರ: ತ್ಯಾಗ ಬಲಿದಾನಗಳ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಶನಿವಾರ ಮುಸ್ಲಿಂ ಸಮೂದಾಯ ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಪಟ್ಟಣದ ವಿವಿಧ ಮೊಹಲ್ಲಾಗಳ ಸಾವಿರಾರು ಮುಸ್ಲಿಂ ನಿವಾಸಿಗಳು ಶನಿವಾರ ಬೆಳಿಗ್ಗೆ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಬಂಧು ಬಾಂಧವರು, ಮಿತ್ರರನ್ನು ಮನೆಗೆ ಕರೆದುಕೊಂಡು ಹಬ್ಬದ ಊಟ ಸವಿದರು. ಹಬ್ಬದ ಹಿನ್ನೆಲೆಯಲ್ಲಿ ಮುಸ್ಲಿಂ ಸಹೋದರರು ಬಡವರಿಗೆ ದಾನ ಧರ್ಮ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.