ರೋಣ: ‘ಬಣಜಿಗ ಸಮುದಾಯ ಸಮಾಜ ಇತರರಿಗೆ ಮಾದರಿಯಾಗಿದ್ದಾರೆ’ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಪಟ್ಟಣದ ಗುರು ಭವನದಲ್ಲಿ ತಾಲ್ಲೂಕು ಬಣಜಿಗ ಕ್ಷೆಮಾಭಿವೃದ್ಧಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆಯ ಅಂಗವಾಗಿ ಹಮ್ಮಿಕೊಂಡಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ 2ನೇ ವರ್ಷದ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.
ರಾಜ್ಯದಲ್ಲಿ 1.70 ಕೋಟಿ ಇರುವ ಲಿಂಗಾಯತರ ಸಂಖ್ಯೆ 45 ಲಕ್ಷಕ್ಕೆ ಇಳಿಮುಖವಾಗಿದ್ದು, ಲಿಂಗಾಯತ ಸಮಾಜ ಒಗ್ಗಟ್ಟು ಪ್ರದರ್ಶಿಸಬೇಕು. ಸಮಾಜದ ಅಭಿವೃದ್ಧಿಯಲ್ಲಿ ರಾಜಕೀಯ ಮಾಡಬಾರದು. ಸಮಾಜದ ಅಭಿವೃದ್ಧಿಗೆ ಶಾಸಕರು, ಸಂಸದರು ಅನುದಾನ ನೀಡಿದ್ದರೂ ಸಮುದಾಯ ಭವನ ಕಾಮಗಾರಿ ಆರಂಭವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಸಮಾಜದ ಅಭಿವೃದ್ಧಿಗೆ ಶಾಸಕರ ನಿಧಿಯಿಂದ ₹1 ಕೋಟಿ ಅನುದಾನ ಕೊಡುತ್ತೇನೆ ಎಂದು ಭರವಸೆ ನೀಡಿದಂತೆ ಮೊದಲ ಹಂತದಲ್ಲಿ ₹25 ಲಕ್ಷ ನೀಡಿದ್ದೇನೆ. ಸಮುದಾಯ ಭವನ ಸಮಸ್ಯೆಯನ್ನು ಎಲ್ಲರೂ ಚರ್ಚಿಸಿ ಪರಿಹಾರ ಕಂಡುಕೊಳ್ಳಿ ಎಂದರು.
ಬಣಜಿಗೆ ಕ್ಷಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ್ ರೂಡಗಿ ಮಾತನಾಡಿದರು. ಎಸ್ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ 85ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು. ವಿಧಾನ ಪರಿಷತ್ ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ರೋಣ ತಾಲ್ಲೂಕು ಬಣಜಿಗ ಸಂಘದ ಅಧ್ಯಕ್ಷ ಮುತ್ತಣ್ಣ ಸಂಗಳದ, ತಾಲ್ಲೂಕು ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸೋಮಲಿಂಗಪ್ಪ ಚರೇದ, ಅಂದಪ್ಪ ಜವಳಿ, ವೀರಣ್ಣ ಶೆಟ್ಟರ್, ಮಂಜುನಾಥ್ ಅಂಗಡಿ, ಹುಚ್ಚೆಶ್ ಜವಳಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.