ನರಗುಂದ: ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟಿಕೆ ಖಂಡಿಸಿ ವಾಟಾಳ್ ನಾಗರಾಜ ಶನಿವಾರ ನೀಡಿದ ರಾಜ್ಯ ಬಂದ್‌ಗೆ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಘಟಕದ ಬೆಂಬಲ ಇಲ್ಲ ಎಂದು ಅಧ್ಯಕ್ಷ ನಬಿಸಾಬ ಕಿಲ್ಲೇದಾರ ಹೇಳಿದರು.
ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಮಾರ್ಚ್ 22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ. ಈ ಕುರಿತು ನಮ್ಮ ಸಂಘಟನೆಯ ಜೊತೆ ಚರ್ಚೆ ಮಾಡಿಲ್ಲ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.