ADVERTISEMENT

ಬಸವಣ್ಣನವರ ಆದರ್ಶ ಪಾಲಿಸೋಣ: ಶಾಸಕ ಡಾ.ಚಂದ್ರು

​ಪ್ರಜಾವಾಣಿ ವಾರ್ತೆ
Published 4 ಮೇ 2025, 14:18 IST
Last Updated 4 ಮೇ 2025, 14:18 IST
ಶಿರಹಟ್ಟಿಯ ಬಸವೇಶ್ವರ ವೃತ್ತದಲ್ಲಿ ಶನಿವಾರ ನಡೆದ ಬಸವೇಶ್ವರ ಜಯಂತಿಯ ವೇದಿಕೆ ಕಾರ್ಯಕ್ರಮವನ್ನು ಶಾಸಕ ಡಾ.ಚಂದ್ರು ಲಮಾಣಿ ಉದ್ಘಾಟಿಸಿದರು.
ಶಿರಹಟ್ಟಿಯ ಬಸವೇಶ್ವರ ವೃತ್ತದಲ್ಲಿ ಶನಿವಾರ ನಡೆದ ಬಸವೇಶ್ವರ ಜಯಂತಿಯ ವೇದಿಕೆ ಕಾರ್ಯಕ್ರಮವನ್ನು ಶಾಸಕ ಡಾ.ಚಂದ್ರು ಲಮಾಣಿ ಉದ್ಘಾಟಿಸಿದರು.   

ಶಿರಹಟ್ಟಿ: ‘ಬಸವಣ್ಣನವರ ಕ್ರಾಂತಿಕಾರಿ ಆಡಳಿತ ಅವಧಿಯ ನಡವಳಿಕೆಗಳು ಪ್ರಸ್ತುತ ಪ್ರಜಾಪ್ರಭುತ್ವದ ಆಡಳಿತ ವ್ಯವಸ್ಥೆಗೆ ಬಹುದೊಡ್ಡ ಮಾದರಿಯಾಗಿದೆ’ ಎಂದು ಶಾಸಕ ಡಾ.ಚಂದ್ರು ಲಮಾಣಿ ಹೇಳಿದರು.

ಬಸವ ಸಮಿತಿ ವತಿಯಿಂದ ಸ್ಥಳೀಯ ಬಸವೇಶ್ವರ ವೃತ್ತದಲ್ಲಿ ಹಮ್ಮಿಕೊಳ್ಳಲಾದ ಕರ್ನಾಟಕ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಬಸವಣ್ಣನವರ ಆದರ್ಶಗಳು ಪ್ರತಿಯೊಂದು ಸಮುದಾಯಕ್ಕೆ ಪೂರಕವಾಗಿದೆ. ಸಮಾಜದಲ್ಲಿನ ಅಂಕುಡೊಂಕುಗಳ ಅಳಿವಿಗಾಗಿ ಪಣತೊಟ್ಟ ಬಸವಣ್ಣನವರ ತತ್ವಾದರ್ಶಗಳನ್ನು ಪಾಲಿಸೋಣ’ ಎಂದು ಹೇಳಿದರು.

ಬಸವೇಶ್ವರ ಚಿತ್ರದ ಬಂಡಿ ಮೆರವಣಿಗೆಯನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಜಾತಾ ದೊಡ್ಡಮನಿ ಚಾಲನೆ ನೀಡಿ ಮಾತನಾಡಿದ ಅವರು, ‘12ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪಿಸುವ ಮೂಲಕ ಸಮ ಸಮಾಜ ಸ್ಥಾಪನೆಯ ಕನಸು ಕಂಡಿದ್ದ ವಿಶ್ವಗುರು ಬಸವಣ್ಣನವರ ವಚನಗಳು ಮತ್ತು ಆದರ್ಶವನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡು ಮಾದರಿ ವ್ಯಕ್ತಿಗಳಾಗಿ ಜೀವನ ನಡೆಸಬೇಕು’ ಎಂದರು.

ADVERTISEMENT

ಸ್ಥಳೀಯ ಅಂಬಾ ಭವಾನಿ ದೇವಸ್ಥಾನದಿಂದ ಹೊರಟ ಮೆರವಣಿಗೆ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಸಂಚರಿಸಿತು. ಬಸವ ಸಮಿತಿ ಅಧ್ಯಕ್ಷ ಎಚ್.ಎಂ. ದೇವಗಿರಿ, ಬಸವರಾಜ ತುಳಿ, ಹುಮಾಯೂನ್‌ ಮಾಗಡಿ, ವಿಶ್ವನಾಥ ಕಪ್ಪತ್ತನವರ, ಸಂತೋಷ ಕುರಿ, ಕೆ.ಎ.ಬಳಿಗೇರ, ನಾಗರಾಜ ಲಕ್ಕುಂಡಿ, ಪಪಂ ಅಧ್ಯಕ್ಷೆ ದೇವಕ್ಕ ಗುಡಿಮನಿ, ಉಪಾಧ್ಯಕ್ಷೆ ನೀಲವ್ವ ಹುಬ್ಬಳ್ಳಿ, ಸದಸ್ಯ ದೀಪು ಕಪ್ಪತ್ತನವರ, ಹೊನ್ನಪ್ಪ ಶಿರಹಟ್ಟಿ, ಅಜ್ಜಣ್ಣ ಪಾಟೀಲ, ಎಂ.ಕೆ.ಲಮಾಣಿ, ಮುನ್ನಾ ಕಾರಬೂದಿ, ಮುತ್ತು ಭಾವಿಮನಿ, ರಾಮಣ್ಣ ಕಂಬಳಿ, ಬಸವರಾಜ ವಡವಿ, ಪ್ರಕಾಶ ಬೋರಶೆಟ್ಟರ, ಯಲ್ಲಪ್ಪ ಇಂಗಳಗಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.