ADVERTISEMENT

ರಾಷ್ಟ್ರೀಯ ಹೆದ್ದಾರಿ ಅನುಮತಿ ಭರವಸೆ: ಸಂಸದ ಬಸವರಾಜ ಬೊಮ್ಮಾಯಿ

ಗಣಪತಿ ದೇವಸ್ಥಾನ ಲೋಕಾರ್ಪಣೆ

​ಪ್ರಜಾವಾಣಿ ವಾರ್ತೆ
Published 28 ಜುಲೈ 2025, 4:04 IST
Last Updated 28 ಜುಲೈ 2025, 4:04 IST
ಲಕ್ಷ್ಮೇಶ್ವರದ ಎಪಿಎಂಸಿ ಆವರಣದಲ್ಲಿ ನಿರ್ಮಿಸಲಾದ ಗಣಪತಿ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿದರು
ಲಕ್ಷ್ಮೇಶ್ವರದ ಎಪಿಎಂಸಿ ಆವರಣದಲ್ಲಿ ನಿರ್ಮಿಸಲಾದ ಗಣಪತಿ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿದರು   

ಲಕ್ಷ್ಮೇಶ್ವರ: ‘ಹೊಸ ರಾಷ್ಟ್ರೀಯ ಹೆದ್ದಾರಿಗೆ ಅನುಮತಿ ನೀಡುವ ಸಂದರ್ಭದಲ್ಲಿ ಗದಗ-ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಅನುಮತಿ ನೀಡುವುದಾಗಿ ಕೇಂದ್ರ ಭೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ’ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಲ್ಲಿನ ರಂಭಾಪುರಿ ಜಗದ್ಗುರು ವೀರಗಂಗಾಧರ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ನಿರ್ಮಿಸಿರುವ ಗಣಪತಿ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ದೇವಸ್ಥಾನಗಳು ಸಂಸ್ಕೃತಿಯ ಪ್ರತೀಕವಾಗಿದ್ದು, ಜನರಲ್ಲಿ ಧಾರ್ಮಿಕ ಭಾವನೆ ಹಾಗೂ ಭಯ-ಭಕ್ತಿ ಮೂಡಿಸುವ ಮೂಲಕ ಸನ್ಮಾರ್ಗದತ್ತ ತೆಗೆದುಕೊಂಡು ಹೋಗುವ ಶ್ರದ್ಧಾ ಕೇಂದ್ರಗಳಾಗಿವೆ. ಮಾರುಕಟ್ಟೆ ವ್ಯಾಪಾರಸ್ಥರು ಸೇರಿ ಗಣಪತಿ ದೇವಸ್ಥಾನ ನಿರ್ಮಿಸಿರುವುದು ಶ್ಲಾಘನೀಯ’ ಎಂದರು.

ADVERTISEMENT

ಗದಗ ಯಲವಿಗಿ ರೈಲು ಸಂಪರ್ಕ ಕುರಿತು ರೈಲ್ವೆ ಅಧಿಕಾರಿಗಳ ಜತೆ ಮಾತನಾಡಿದ್ದೇನೆ. ಬಜೆಟ್‍ನಲ್ಲಿ ₹200 ಕೋಟಿ ಅನುದಾನ ಮೀಸಲಿಡಲಾಗಿದೆ. ಡಿಪಿಆರ್‌ ಒಪ್ಪಿಗೆ ಪಡೆದುಕೊಂಡು ಭೂಸ್ವಾಧೀನ ಪ್ರಕ್ರಿಯೆ ಮುಗಿದ ಬಳಿಕ ಕಾಮಗಾರಿ ಆರಂಭಿಸಲಾಗುವುದು’ ಎಂದರು.

ಈ ಸಂದರ್ಭದಲ್ಲಿ ಹೋಮ-ಹವನ, ಪೂಜಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ನೊಣವಿನಕೆರೆ ಕಾಣಸಿದ್ದೇಶ್ವರ ಮಠದ ಕರಿವೃಷಭ ದೇಶಿಕೇಂದ್ರ ಶಿವಯೋಗಿಶ್ವರ ಸ್ವಾಮೀಜಿ, ಮುಕ್ತಿಮಂದಿರದ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು. ಶಾಸಕ ಡಾ.ಚಂದ್ರು ಲಮಾಣಿ, ಮಾಜಿ ಶಾಸಕರಾದ ಗಂಗಣ್ಣ ಮಹಾಂತಶೆಟ್ಟರ, ವರ್ತಕರ ಸಂಘದ ಅಧ್ಯಕ್ಷ ಓಂಪ್ರಕಾಶ ಜೈನ್, ಸಂಗಣ್ಣ ಹನುಮಸಾಗರ, ಸಿದ್ದನಗೌಡ ಬಳ್ಳೊಳ್ಳಿ, ಸುಭಾಷ ಓದುನವರ, ತೋಂಟೇಶ ಮಾನ್ವಿ, ಕುಬೇರಪ್ಪ ಮಹಾಂತಶೆಟ್ಟರ, ಆನಂದ ಮೆಕ್ಕಿ, ಎಸ್.ಕೆ. ಕಾಳಪ್ಪನವರ, ಸಂತೋಷ ಬಾಳಿಕಾಯಿ, ಎನ್.ಎಸ್. ಪಾಟೀಲ, ರಾಜು ಕೊಟಗಿ, ವಿಜಯ ಬೂದಿಹಾಳ, ಸೋಮೇಶ ಉಪನಾಳ, ರಾಘವೇಂದ್ರ ಸದಾವರ್ತಿ, ಈರಣ್ಣ ಅಕ್ಕೂರ, ಎಂ.ಆರ್. ಪಾಟೀಲ, ಬಸವರಾಜ ಮಹಾಂತಶೆಟ್ಟರ, ನೀಲಪ್ಪ ಸಂಶಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.