ADVERTISEMENT

ಕೃಷ್ಣ ಬೈರೇಗೌಡ ದಂಪತಿಗೆ ‘ಮಾನವತಾವಾದಿ ಬಸವೇಶ್ವರ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2025, 14:55 IST
Last Updated 27 ಏಪ್ರಿಲ್ 2025, 14:55 IST
ಕೃಷ್ಣಬೈರೇಗೌಡ
ಕೃಷ್ಣಬೈರೇಗೌಡ   

ಗದಗ: ‘ಲಕ್ಷ್ಮೇಶ್ವರದ ಲಿಂಬಯ್ಯಸ್ವಾಮಿ ಪ್ರತಿಭಾ ಪ್ರತಿಷ್ಠಾನದ ‘ಮಾನವತಾವಾದಿ ಬಸವೇಶ್ವರ ಪ್ರಶಸ್ತಿ’ಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಮತ್ತು ಅವರ ಪತ್ನಿ ಮೀನಾಕ್ಷಿ ಅವರನ್ನು ಆಯ್ಕೆ ಮಾಡಲಾಗಿದೆ’ ಎಂದು ಪ್ರತಿಷ್ಠಾನದ ಅಧ್ಯಕ್ಷ ಶಿವಪ್ರಕಾಶ ಲಿಂಬಯ್ಯಸ್ವಾಮಿಮಠ ತಿಳಿಸಿದ್ದಾರೆ.

‘ಆದರ್ಶ ದಂಪತಿ’ ವಿಭಾಗದಿಂದ ಸಚಿವ ಕೃಷ್ಣಬೈರೇಗೌಡ ದಂಪತಿಯನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಏಪ್ರಿಲ್ 29ರಂದು ಗದಗದ ತೋಂಟದಾರ್ಯ ಮಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕರ್ನಾಟಕ ಗಾಂಧೀ ಸ್ಮಾರಕ ಭವನ ಅಧ್ಯಕ್ಷ ವೂಡೇ ಪಿ.ಕೃಷ್ಣ ಪ್ರಶಸ್ತಿ ಪ್ರದಾನ ಮಾಡುವರು. ಪ್ರಶಸ್ತಿ ₹1 ಲಕ್ಷ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ’ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT