ADVERTISEMENT

ಸ್ವಚ್ಛತೆ, ನೀರು ಪೂರೈಕೆ ನಿರಂತರವಾಗಿರಲಿ: ಚಂದ್ರಶೇಖರ

ಲಕ್ಕಲಕಟ್ಟಿ ತಾಂಡಾ ಭೇಟಿ ವೇಳೆ ಗ್ರಾ.ಪಂ ಸಿಬ್ಬಂದಿಗೆ ಇಒ ಸೂಚನೆ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2025, 4:16 IST
Last Updated 30 ಅಕ್ಟೋಬರ್ 2025, 4:16 IST
ಗಜೇಂದ್ರಗಡ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಲಕ್ಕಲಕಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದರು
ಗಜೇಂದ್ರಗಡ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಲಕ್ಕಲಕಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದರು   

ಗಜೇಂದ್ರಗಡ: ತಾಲ್ಲೂಕಿನ ತಾಂಡಾ ನಿವಾಸಿಗಳಿಗೆ ಮೂಲಸೌಲಭ್ಯಗಳ ಪೂರೈಕೆಯಲ್ಲಿ ಯಾವುದೇ ಲೋಪದೋಷಗಳಾಗದಂತೆ ನೋಡಿಕೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಸೂಚಿಸಿದರು.

ತಾಂಡಾ ನಿವಾಸಿಗಳು ದೂರವಾಣಿ ಕರೆ ಮಾಡಿ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ, ಗಜೇಂದ್ರಗಡ ತಾಲ್ಲೂಕು ಪಂಚಾಯಿತಿ ಇಒ ಬುಧವಾರ ಲಕ್ಕಲಕಟ್ಟಿ ತಾಂಡಾಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದರು.

ಭೇಟಿ ವೇಳೆ ಲಕ್ಕಲಕಟ್ಟಿ ತಾಂಡಾದಲ್ಲಿ 50ಕ್ಕೂ ಅಧಿಕ ಕುಟುಂಬಗಳಿದ್ದು, ತಾಂಡಾದಲ್ಲಿ ನಿರಂತರ ವಿದ್ಯುತ್ ಸಂಪರ್ಕಕ್ಕೆ ಗ್ರಾಮಸ್ಥರು ಮನವಿ ಮಾಡಿದರು.

ADVERTISEMENT

ಮನವಿಗೆ ಸ್ಪಂದಿಸಿದ ಇಒ, ಸಂಬಂಧಿಸಿದ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ನಿರಂತರ ವಿದ್ಯುತ್ ಸಂಪರ್ಕ ಇಲ್ಲದೇ ತಾಂಡಾ ನಿವಾಸಿಗಳು ಸಂಕಷ್ಟ ಎದುರಿಸುತ್ತಿದ್ದು, ಸಮಸ್ಯೆ ಬಗೆಹರಿಸುವಂತೆ ಸೂಚಿಸಿದರು.

ತಾಂಡಾಕ್ಕೆ ಸಮರ್ಪಕ ಕುಡಿಯುವ ನೀರು ಹಾಗೂ ತಾಂಡಾದಲ್ಲಿ ಸ್ವಚ್ಛತೆ ಕಾರ್ಯ ನಿರಂತರವಾಗಿ ಕೈಗೊಂಡು ತಾಂಡಾದ ವಾತಾವರಣ ಸ್ವಚ್ಛವಾಗಿಟ್ಟುಕೊಳ್ಳುವಂತೆ ಸಿಬ್ಬಂದಿಗೆ ತಾಕೀತು ಮಾಡಿದರು.

ಲಕ್ಕಲಕಟ್ಟಿ ಗ್ರಾಮ ಪಂಚಾಯಿತಿ ಪಿಡಿಒ ಶಿವಯೋಗಿ ರಿತ್ತಿ, ಕಾರ್ಯದರ್ಶಿ ಶರಣಪ್ಪ ಮೇಟಿ, ತಾಂಡಾ ರೋಜಗಾರ ಮಿತ್ರ ಸಕ್ಕುಬಾಯಿ ರಾಥೋಡ, ಗ್ರಾಮ ಕಾಯಕ ಮಿತ್ರ ಸುಜಾತ ಮ್ಯಾಗೇರಿ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಇದ್ದರು.

ನರೇಗಾ ಕಾಮಗಾರಿಗಳಲ್ಲಿ ಕೆಲಸ ಮಾಡಲು ಕೂಲಿಕಾರರಿಗೆ ಕೇಂದ್ರ ಸರ್ಕಾರ ಇ-ಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಿದೆ. ಅ.31ರೊಳಗಾಗಿ ತಾಂಡಾದ ನರೇಗಾ ಕೂಲಿಕಾರರೆಲ್ಲರೂ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಇಲ್ಲವೇ ನರೇಗಾ ಉದ್ಯೋಗ ಚೀಟಿ ರದ್ದಾಗುವುದು
ಚಂದ್ರಶೇಖರ ಬಿ. ಕಂದಕೂರ ಇಒ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.