ಗದಗ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಗೆಲುವಿಗಾಗಿ ಮತ್ತು ಕೇಂದ್ರದಲ್ಲಿ ಮಂತ್ರಿ ಆಗಲೆಂದು ಹರಕೆ ಹೊತ್ತಿದ್ದ ಜೆಡಿಎಸ್ ರಾಜ್ಯ ವಕ್ತರ ವೆಂಕನಗೌಡ ಆರ್. ಗೋವಿಂದಗೌಡ್ರ ನಗರದ ಪಂಡಿತ್ ಪುಟ್ಟರಾಜ ಗವಾಯಿಗಳ ಮಠದಲ್ಲಿ ಭಾನುವಾರ ಬೆಳಿಗ್ಗೆ 11ಕ್ಕೆ ಹರಕೆ ತೀರಿಸಲಿದ್ದಾರೆ.
ಮಠದಲ್ಲಿ 1,008 ಹೋಳಿಗೆ ಊಟದ ವ್ಯವಸ್ಥೆ ಮಾಡುವುದರ ಮುಖಾಂತರ ಹರಕೆ ತೀರಿಸಲಿದ್ದಾರೆ. ಭಾನುವಾರ ಗುರು ಪೂರ್ಣಿಮೆ ಕೂಡ ಇರುವುದರಿಂದ 18 ಮಂದಿ ನಿವೃತ್ತ ಶಿಕ್ಷಕರಿಗೆ ಗುರುವಂದನಾ ಕಾರ್ಯಕ್ರಮವನ್ನು ಕೂಡ ಹಮ್ಮಿಕೊಂಡಿದ್ದಾರೆ.
ಮಾಜಿ ಸಚಿವ ಹನುಮಂತಪ್ಪ ಆಲ್ಕೋಡ್ ನೇತೃತ್ವ ವಹಿಸಲಿದ್ದು, ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಕಲ್ಲಯ್ಯಜ್ಜನವರು ಸಾನ್ನಿಧ್ಯ ವಹಿಸುವರು ಎಂದು ಜೆಡಿಎಸ್ ಗದಗ ಜಿಲ್ಲಾ ವಕ್ತಾರ ಜಿ.ಕೆ.ಕೊಳ್ಳಿಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.